ADVERTISEMENT

ಬಂಡಾಯದ ಬಿಸಿ ತಾರಕಕ್ಕೆ; ಅಪ್ಪು ಬೆಂಬಲಿಗರ ಸಭೆ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರ; ಸಭೆಗೆ ಚುನಾವಣಾಧಿಕಾರಿಗಳ ನೋಟಿಸ್

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2018, 13:58 IST
Last Updated 13 ಏಪ್ರಿಲ್ 2018, 13:58 IST

ವಿಜಯಪುರ: ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ದಿನೇ ದಿನೇ ಉಲ್ಭಣಗೊಳ್ಳುತ್ತಿದೆ. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿಗೆ ಟಿಕೆಟ್‌ ಕೈ ತಪ್ಪಿರುವುದಕ್ಕೆ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನಗರದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಗುರುವಾರ ರಾತ್ರಿ ನಡೆದ ಬೆಂಬಲಿಗರ ಸಭೆಗೆ. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಮಹಾನಗರ ಪಾಲಿಕೆಯ ಎಲ್ಲಾ ವಾರ್ಡ್‌ಗಳಿಂದಲೂ ಅಪ್ಪು ಬೆಂಬಲಿಗರು ಹಾಜರಿದ್ದರು.

‘ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು, ಎಲ್ಲ ಜಾತಿಯ ಮುಖಂಡರು, ಮಹಿಳಾ ಅಭಿಮಾನಿಗಳು, ಅಂಗವಿಕಲರು ಸೇರಿದಂತೆ ಎಲ್ಲ ವರ್ಗದ ಜನ ಸಭೆಗೆ ಹಾಜರಿದ್ದರು. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯ, ಅನಿಸಿಕೆ ತಿಳಿಸಿದರು.

ADVERTISEMENT

ಮೂರು ದಶಕ ನಿಷ್ಠಾವಂತನಾಗಿ ದುಡಿದ ಕಾರ್ಯಕರ್ತನಿಗೆ ಬಿಜೆಪಿ ಟಿಕೆಟ್‌ ನೀಡಿಲ್ಲ. ಇನ್ನೂ ಮೂರು ಮುಕ್ಕಾಲು ವರ್ಷ ವಿಧಾನ ಪರಿಷತ್ ಸದಸ್ಯತ್ವ ಹೊಂದಿರುವ ಬಸನಗೌಡ ಪಾಟೀಲ ಯತ್ನಾಳರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದನ್ನು ಖಂಡಿಸಿ ಎಲ್ಲರೂ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಬೆಂಬಲಿಸುತ್ತೇವೆ. ವಿಧಾನಸಭಾ ಚುನಾವಣಾ ಅಖಾಡಕ್ಕಿಳಿಸುತ್ತೇವೆ ಎಂಬ ಒಕ್ಕೊರಲ ನಿರ್ಣಯ ತೆಗೆದುಕೊಂಡರು’ ಎಂದು ಸಭೆಯಲ್ಲಿ ಹಾಜರಿದ್ದ ಮಹಾನಗರ ಪಾಲಿಕೆ ಸದಸ್ಯ ಗೋಪಾಲ ಘಟಕಾಂಬಳೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.