ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುತ್ತಿಗೆ 18ರಂದು

​ಪ್ರಜಾವಾಣಿ ವಾರ್ತೆ
Published 16 ಮೇ 2017, 6:26 IST
Last Updated 16 ಮೇ 2017, 6:26 IST

ವಿಜಯಪುರ: ನ್ಯಾ.ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸಲು ಒತ್ತಾಯಿಸಿ ಹಿಂದೇಟು ಹಾಕುತ್ತಿರುವದನ್ನು ಖಂಡಿಸಿ, ಇದೇ 18 ರಂದು ಜಿಲ್ಲೆಗೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭಾರಿ ಪ್ರಮಾಣದಲ್ಲಿ ಮುತ್ತಿಗೆ ಹಾಕಲು ಮಾದಿಗ ದಂಡೋರ ಯುವಸೇನೆ ನಿರ್ಧ ರಿಸಲಾಗಿದೆ.

ಕಳೆದ 20 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತ ಬರಲಾಗಿದೆ. ಆದರೆ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದೇ ವಿಳಂಭ ನೀತಿ ಅನುಸರಿಸುತ್ತಿದೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ಮುತ್ತಿಗೆ ಹಾಕಿ ಒತ್ತಾಯಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪ್ರಧಾನಿ ಮೂಲಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT