ADVERTISEMENT

ಅತ್ಯಾಚಾರ; ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 12:45 IST
Last Updated 21 ಮಾರ್ಚ್ 2018, 12:45 IST

ಯಾದಗಿರಿ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಪ್ರಕರಣ ವಿಚಾರಣೆ ನಡೆಸಿರುವ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿ ನಾಗರಾಜ್‌ ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ ₹2.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ಪ್ರಕಟಿಸಿದೆ.

ಸುರಪುರ ತಾಲ್ಲೂಕಿನ ಹೇಮನೂರು ಗ್ರಾಮದಲ್ಲಿ 2017ರ ಜನನವರಿಯಲ್ಲಿ ಬಾಲಕಿ ಅತ್ಯಾಚಾರ ಪ್ರಕರಣ ನಡೆದಿತ್ತು. ಸಂತ್ರಸ್ತ ಬಾಲಕಿ ದೂರು ದಾಖಲಿಸಿದ್ದಳು.

ವಿಚಾರಣೆ ನಡೆಸಿರುವ ನ್ಯಾಯಾಧೀಶ ನಾರಾಯಣ ನಾಯಕ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿ ಪರವಾಗಿ ಸರ್ಕಾರಿ ವಕೀಲ ಎಸ್‌.ಅನಂತರಡ್ಡಿ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.