ADVERTISEMENT

ಜೈಲ್ ಭರೋ ಚಳವಳಿ: ರೈತರ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2017, 7:34 IST
Last Updated 18 ಮಾರ್ಚ್ 2017, 7:34 IST

ಕಲಬುರ್ಗಿ: ತೊಗರಿ ಖರೀದಿ ಅವಧಿಯನ್ನು ಏಪ್ರಿಲ್ 30ರ ವರೆಗೆ ವಿಸ್ತರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜೈಲ್ ಭರೋ ಚಳವಳಿ ನಡೆಸುತ್ತಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಹಾಗೂ ರೈತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ಪ್ರತಿ ಕ್ವಿಂಟಲ್ ತೊಗರಿಗೆ ₹7,500 ಬೆಂಬಲ ಬೆಲೆ ನಿಗದಿಪಡಿಸಬೇಕು. ತೊಗರಿ ಖರೀದಿ ಕೇಂದ್ರಗಳಲ್ಲಿ ತೊಗರಿ ಖರೀದಿಸಿದ ರೈತರಿಗೆ ಕೂಡಲೇ ಹಣ ನೀಡಬೇಕು.
ಆಮದು ಬೇಳೆಕಾಳುಗಳ ಮೇಲೆ ಶೇ 30ರಷ್ಟು ತೆರಿಗೆ ವಿಧಿಸಬೇಕು ಎಂದು ಆಗ್ರಹಿಸಿದರು.

ಈಗ ಖರೀದಿಸುತ್ತಿರುವ 1.75 ಲಕ್ಷ ಟನ್ ತೊಗರಿಯ ಜತೆಗೆ ಇನ್ನೂ 3.25 ಲಕ್ಷ ಟನ್ ತೊಗರಿ ಖರೀದಿಸಬೇಕು ಇದಕ್ಕಾಗಿ ಹೆಚ್ಚುವರಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ, ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಅಖಿಲ ಭಾರತ ಕಿಸಾನ್ ಮಂಡಳಿ ಜಿಲ್ಲಾ ಅಧ್ಯಕ್ಷ ಮೌಲಾಮುಲ್ಲಾ, ತೊಗರಿ ಬೆಳೆಗಾರರ ಹೋರಾಟ ಸಮಿತಿಯ ಮಂಜುನಾಥಗೌಡ, ಅಂಬರೀಷಗೌಡ, ಸುಭಾಷ   ಹೊಸಮನಿ, ಅಶೋಕ ಮ್ಯಾಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.