ADVERTISEMENT

ಧರ್ಮಸ್ಥಳ ಸಂಸ್ಥೆಯಿಂದ ಕೊಳಿಹಾಳ ಕೆರೆಗೆ ಕಾಯಕಲ್ಪ

​ಪ್ರಜಾವಾಣಿ ವಾರ್ತೆ
Published 19 ಮೇ 2017, 6:11 IST
Last Updated 19 ಮೇ 2017, 6:11 IST

ಹುಣಸಗಿ:‘ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕೆರೆಗಳಿಗೆ ಕಾಯಕಲ್ಪ ಕೊಡುವ ಯೋಜನೆಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆ ಕೈಗೊಂಡಿದೆ’ ಎಂದು ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ತಿಳಿಸಿದರು.

ಕೆರೆ ಕಾಯಕಲ್ಪ ಯೋಜನೆಗೆ ಸಂಬಂಧಿಸಿದಂತೆ ಹುಣಸಗಿ ಸಮೀಪದ ಕೊಳಿಹಾಳ ಗ್ರಾಮದಲ್ಲಿ ಗುರುವಾರ ಗ್ರಾಮಸ್ಥರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಸಂಸ್ಥೆಯ ಯಾದಗಿರಿ ಜಿಲ್ಲಾ ಘಟಕದ ನಿರ್ದೇಶಕ ಸಿ.ದಿನೇಶ ಮಾತನಾಡಿ, ‘ಜಿಲ್ಲೆಯಲ್ಲಿ ಈ ಸಂಸ್ಥೆಯಡಿ ಒಟ್ಟು 4,500 ಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಮಹಿಳಾ, ರೈತರ ಸ್ವಾವಲಂಬಿ ಜೀವನಕ್ಕೆ ಆದ್ಯತೆ ನೀಡಿದ್ದೇವೆ’ ಎಂದರು.

ADVERTISEMENT

‘ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೆರೆ ಹೂಳೆತ್ತುವ ಯೋಜನೆ ಕೈಗೊಳ್ಳುವ ಉದ್ದೇಶವಿದ್ದು, ಅಂದಾಜು 5 ಎಕರೆ ಪ್ರದೇಶದಲ್ಲಿ  ಯೋಜನೆ ರೂಪಿಸಲಾಗುತ್ತಿದೆ’ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮವ್ವ ಹುಲಗಪ್ಪ, ಸಂಸ್ಥೆ ತಾಲ್ಲೂಕು ಯೋಜನಾಧಿಕಾರಿ ಡಿ.ಸಂದೀಪ್, ಅಶೋಕ ದೇಸಾಯಿ, ರೇಣುಕ ಪಾಟೀಲ, ನಿಂಗಣ್ಣ ಮಾಸ್ಟರ್ ,ಹುಲಗಪ್ಪ, ದೇವಣ್ಣ, ಬಸವರಾಜ, ಬಸಮ್ಮ ಬಳವಾಟ, ರಚಿಸಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.