ADVERTISEMENT

ನಗರ ಅಭಿವೃದ್ಧಿಗಾಗಿ ಅನುದಾನಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2017, 6:01 IST
Last Updated 8 ಜುಲೈ 2017, 6:01 IST

ಯಾದಗಿರಿ: ನಗರಾಭಿವೃದ್ಧಿಗೆ ಸಂಬಂಧಿ ಸಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಅವರ ನೇತೃತ್ವದ ನಿಯೋಗ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಅಧ್ಯಕ್ಷೆ ಲಲಿತಾ ಅನಪೂರ ಮಾತನಾಡಿ, ‘ನಗರದ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡ ಬೇಕಾದ ಅವಶ್ಯಕತೆ ಇದೆ. ನಗರದಲ್ಲಿ 31 ವಾರ್ಡ್‌ಗಳಿದ್ದು, ₹1 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಹೊಸ ಬಡಾವಣೆಯಲ್ಲಿ ಸಿಸಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಬೇಕು’ ಎಂದರು.

‘ರಾಜ್ಯ ಸರ್ಕಾರವು ಎಚ್‌ಕೆಆರ್‌ಡಿಬಿ ವತಿಯಿಂದ ಈಗಾಗಲೇ ಗ್ರಾಮೀಣ ಪ್ರದೇಶಕ್ಕೆ ಕೋಟ್ಯಂತರ ರೂಪಾಯಿ ಬಿಡುಗಡೆ ಮಾಡಿದೆ. ಯಾದಗಿರಿ ಸಮಗ್ರ ಅಭಿವೃದ್ಧಿಗೆ ಮಂಡಳಿ ವತಿಯಿಂದ ಅನುದಾನ ಬಿಡುಗಡೆ ಮಾಡಬೇಕು’ ಎಂದರು.

ADVERTISEMENT

ಮನವಿಗೆ ಸ್ಪಂದಸಿದ ಸಚಿವ ಪ್ರಿಯಾಂಕ್ ಖರ್ಗೆ, ‘ರಾಜ್ಯ ಸರ್ಕಾರವು ನಗರೋತ್ಥಾನ ಸೇರಿದಂತೆ ಹಲವು ಯೋಜನೆಗಳ ಮೂಲಕ ನಗರಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ.

ಇದೇ ಪ್ರಥಮ ಬಾರಿಗೆ ನಗರಸಭೆ ಅಧ್ಯಕ್ಷರ ನಿಯೋಗ ಭೇಟಿ ಮಾಡಿ, ನಗರದ ಸಮಸ್ಯೆಗಳ ಸಮಗ್ರವಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಬಗ್ಗೆ ಚರ್ಚಿಸಲು ತಿಂಗಳಾಂತ್ಯದಲ್ಲಿ ಯಾದಗಿರಿ ನಗರಸಭೆಯಲ್ಲಿ ಸಭೆ ನಡೆಸಲಾಗು ವುದು’ ಎಂದು ಭರವಸೆ ನೀಡಿದರು. ನಿಯೋಗದಲ್ಲಿ ನಗರಸಭೆ ಸದಸ್ಯರಾದ ಮರೆಪ್ಪ ಚಟ್ಟೇರಕರ್, ಮಹ್ಮದ್ ಕಮಲ್ ಹಾಗೂ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.