ADVERTISEMENT

ಬ್ಯಾಂಕ್‌ನಲ್ಲಿ ನಡೆಯದ ಅಂಬೇಡ್ಕರ್ ಜಯಂತಿ: ಸಿಬ್ಬಂದಿ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 9:22 IST
Last Updated 16 ಏಪ್ರಿಲ್ 2017, 9:22 IST

ಕಕ್ಕೇರಾ: ಪಟ್ಟಣದ ಎಸ್‌ಬಿಐ ಬ್ಯಾಂಕ್‌ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಜಯಂತಿ ಆಚರಿಸಲಾಗಿಲ್ಲ ಎಂದು ಆರೋಪಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಬ್ಯಾಂಕ್ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ದೇಶದಲ್ಲೆಡೆ ಸರ್ಕಾರಿ ಕಚೇರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ ಜಯಂತಿ ಆಚರಿಸಲಾ ಗುತ್ತದೆ. ಆದರೆ ಎಸ್‌ಬಿಐ ಬ್ಯಾಂಕ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಜಯಂತಿ ಆಚರಿಸದಿರುವುದು ಖಂಡನೀಯ ಎಂದು ಸಂಘಟನೆಯ ತಾಲ್ಲೂಕು ಘಟಕ ದ ಸಂಚಾಲಕ ಗುಡದಪ್ಪ ಬಿಳೇಭಾವಿ ಅಸಮಾಧಾನ ವ್ಯಕ್ತಪಡಿಸಿದರು.
ಅಂಬೇಡ್ಕರ್‌ ಅವರ ಜಯಂತಿ ಯನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಆಚರಿಸಬೇಕಿತ್ತು. ಅವರ ವಿರುದ್ಧ ಹಿರಿಯ ಅಧಿಕಾರಿಗಳು  ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಂದಾಯ ಇಲಾಖೆ ಅಧಿಕಾರಿ ಸಂತೋಷರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡರಾದ ಮರಿಲಿಂಗಪ್ಪ ಗುಡಿಮನಿ, ಹಣಮಂತ, ದೇವು ಎಂಟಮನೆ, ಬಸವರಾಜ, ಯಲ್ಲಪ್ಪ, ಮಾನಪ್ಪ ಹುಣಸಿಹೊಳೆ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.