ADVERTISEMENT

‘ಮಕ್ಕಳ ಶೈಕ್ಷಣಿಕ ಪ್ರಗತಿ ದಾಖಲೀಕರಣ ಆಗಲಿ’

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2017, 5:48 IST
Last Updated 21 ಏಪ್ರಿಲ್ 2017, 5:48 IST

ಯಾದಗಿರಿ: ‘ಜಿಲ್ಲೆಯಲ್ಲಿನ ಮಕ್ಕಳ ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಯಾವ ಮಾಹಿತಿ ಯೂ ಸಿಗುವುದಿಲ್ಲ. ಬಹುತೇಕ ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದಾರೆ. ಅಂತ ಹವರನ್ನು ಮುಖ್ಯವಾಹಿನಿಗೆ ತರುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಯ ದಾಖಲೀಕರಣ ಆಗಬೇಕಿದೆ’ ಎಂದು ಹಿರಿಯ ಸಾಹಿತಿ ವಿಶ್ವನಾಥರಡ್ಡಿ ಗೊಂದ ಡಗಿ ಅಭಿಪ್ರಾಯಪಟ್ಟರು.

ನಗರದ ಸ್ತ್ರೀಶಕ್ತಿ ಭವನದಲ್ಲಿ ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಸಗರ ನಾಡು ಸೇವಾ ಪ್ರತಿಷ್ಠಾನ ಸಹಯೋಗ ದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.‘ಶಿಕ್ಷಣದಿಂದ ಮಾತ್ರ ಸರ್ವತೋ ಮುಖ ಪ್ರಗತಿ ಸಾಧ್ಯ. ಮಕ್ಕಳು ಶಿಕ್ಷಣ ಜೊತೆಗೆ ಇಂತಹ ಶಿಬಿರಗಳ ಮೂಲಕ ಕಲೆ, ಚಿತ್ರಕಲೆ, ಸಂಗೀತ, ನೃತ್ಯ ಇತರೆ ಕಲೆಗಳನ್ನು ಕರಗತ ಮಾಡಿಕೊಳ್ಳಬೇಕು’ ಎಂದರು.

‘ಇಂದಿಗೂ ಕೂಡಾ ಗ್ರಾಮೀಣ ಪ್ರದೇಶದಲ್ಲಿ ಅನಕ್ಷರತೆ, ಮೌಢ್ಯ ಪ್ರಭಾವದಿಂದ ಬಾಲ್ಯ ವಿವಾಹ, ದೇವ ದಾಸಿ ಪದ್ಧತಿ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ, ಸಮಾನತೆ, ಸ್ವಾತಂತ್ರ್ಯ ಹಕ್ಕುಗಳನ್ನು ಸಂವಿಧಾನ ನೀಡಿದೆ. ಆದರೂ ಕೂಡ ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಬಾಲಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಮಕ್ಕಳ ಅಪರಾಧ ಸಂಖ್ಯೆ ಕೂಡ ಹೆಚ್ಚುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

ಬಾಲಕಾರ್ಮಿಕ ಜಿಲ್ಲಾ ಯೋಜನಾ ಧಿಕಾರಿ ರಘುವೀರ್‌ ಸಿಂಗ್‌ ಠಾಕೂರ್‌ ಶಿಬಿರ ಉದ್ಘಾಟಿಸಿದರು.ಜಿಲ್ಲಾ ತಂಬಾಕು ನಿಷೇದ ಸಲಹೆ ಗಾರರಾದ ಮಹಾಲಕ್ಷ್ಮೀ, ತಂಬಾಕು ವ್ಯಸನದಿಂದ ಆಗುವ ಅನಾಹುತ ಕುರಿತು ಮಕ್ಕಳಿಗೆ ಮಾಹಿತಿ ನೀಡಿದರು.ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಬಾಲ ವಿಕಾಸ ಅಕಾಡೆಮಿ ಸದಸ್ಯ ಬಸವರಡ್ಡಿ ಎಂ.ಟಿ. ಪಲ್ಲಿ, ಸಾಮಾ ಜಿಕ ಕಾರ್ಯಕರ್ತ ಸೈದಪ್ಪ ಗುತ್ತೇದಾರ ವೇದಿಕೆಯಲ್ಲಿದ್ದರು. ಸಂಪನ್ಮೂಲ ವ್ಯಕ್ತಿ ಗುರುಪ್ರಸಾದ ವೈದ್ಯ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.