ADVERTISEMENT

ಮತದಾನ ಪ್ರತಿಯೊಬ್ಬರ ಕರ್ತವ್ಯ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 5:53 IST
Last Updated 22 ಡಿಸೆಂಬರ್ 2017, 5:53 IST

ಯಾದಗಿರಿ: ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನವನ್ನು ಮಾಡಬೇಕು. ಸಂವಿಧಾನ ದೇಶದ ಪ್ರತಿ ಪ್ರಜೆಗೆ ನೀಡಿರುವ ಹಕ್ಕು, ಅದನ್ನು ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗುರುಲಿಂಗಪ್ಪ ಮಿಣಜಿಗಿ ಹೇಳಿದರು.

ನಗರದ ನ್ಯೂ ಕನ್ನಡ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯೂ ಕನ್ನಡ ಪದವಿಪೂರ್ವ ಮಹಾ ವಿದ್ಯಾಲಯದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನತಂತ್ರ ವ್ಯವಸ್ಥೆ ಬಲಗೊಳ್ಳಲು ಹೆಚ್ಚು ಪ್ರಮಾಣದಲ್ಲಿ ಮತದಾನ ನಡೆಯಬೇಕು. ಅರ್ಹ ಮತದಾರರು ಮತದಾನದಲ್ಲಿ ಪಾಲ್ಗೊಳ್ಳಬೇಕು.ಮತದಾರರು ತಮ್ಮ ಹಕ್ಕು ಚಲಾಯಿಸುವಾಗ ಸ್ವಂತ ವಿವೇಚನೆಯನ್ನು ಬಳಸಬೇಕು. ದೇಶದ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೃಢ ಸಂಕಲ್ಪ ಮಾಡಬೇಕು ಎಂದರು.

ADVERTISEMENT

ವಿದ್ಯಾರ್ಥಿಗಳಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಲು ಪ್ರಬಂಧ ಹಾಗೂ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನ್ಯೂಕನ್ನಡ ಕಾಲೇಜಿನ ಪ್ರಾಚಾರ್ಯ ರಘುನಾಥರಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕರಾದ ಚಂದ್ರಕಾಂತ, ಸರ್ವಜ್ಞ ಕಾಲೇಜಿನ ಪ್ರಾಚಾರ್ಯ ಗಂಗಾಧರ ಬಡಿಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.