ADVERTISEMENT

ಯಾದಗಿರಿ ಪ್ರತ್ಯೇಕ ವಿವಿಗೆ ಒತ್ತಾಯಿಸಿ ಪ್ರತಿಭಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2017, 6:26 IST
Last Updated 9 ಜನವರಿ 2017, 6:26 IST

ಯಾದಗಿರಿ: ‘ಯಾದಗಿರಿ, ರಾಯ ಚೂರು, ಕೊಪ್ಪಳ ಜಿಲ್ಲೆ ಗಳನ್ನೊಳಗೊಂಡಂತೆ ಪ್ರತ್ಯೇಕ ವಿಶ್ವ ವಿದ್ಯಾಲಯ ಸ್ಥಾಪಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಭೀಮುನಾಯಕ ಒತ್ತಾಯಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ ಈಗಾಗಲೇ ಸರ್ಕಾರಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಸಂಬಂಧಿ ಸಿದಂತೆ ಸಮಿತಿ ಪ್ರೊ.ಎಸ್.ಆರ್. ನಿರಂಜನ್ ನೇತೃತ್ವದ ತಂಡ ರಾಯ ಚೂರು ಜಿಲ್ಲೆಯ ಯರಗೇರಾದಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ಖಾನಾಪುರದಲ್ಲಿ ಸ್ಥಳ ಪರಿಶೀಲನೆ ನಡೆಸಿದೆ. ಇದರೊಂದಿಗೆ ಪ್ರತ್ಯೇಕ ವಿವಿ ಸ್ಥಾಪನೆ ಮಾಡಿದರೆ ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಗೆ ಬಲ ನೀಡಿದಂತಾಗುತ್ತದೆ’ ಎಂದರು.

‘ಕೇಂದ್ರ ಸರ್ಕಾರ ರಾಯ ಚೂರಿನಲ್ಲಿ ಈಗಾಗಲೇ ಐಐಟಿ ಸಂಸ್ಥೆ ಸ್ಥಾಪಿಸಿದೆ. ಜೊತೆಗೆ ರಾಯಚೂರು ಜಿಲ್ಲೆಯಲ್ಲಿ ಅನೇಕ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಗಳು ಇವೆ. ಆದರೆ ಯಾದಗಿರಿಯಲ್ಲಿ ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗಳು ಇಲ್ಲ. ಹಾಗಾಗಿ, ವಿಶ್ವವಿದ್ಯಾಲಯವನ್ನು ಯಾದಗಿರಿಯಲ್ಲಿಯೇ ಸ್ಥಾಪಿಸಲು ಸರ್ಕಾರ ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಯಾದಗಿರಿ ಜಿಲ್ಲೆಯಾಗಿ 8 ವರ್ಷಗಳಾದರೂ ಜಿಲ್ಲಾ ಕೇಂದ್ರದಲ್ಲಿ ಇಂದಿಗೂ ಸರ್ಕಾರಿ ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ವೈದ್ಯಕೀಯ ಕಾಲೇಜು ಸ್ಥಾಪಿಸಿಲ್ಲ. ಹಾಗಾಗಿ, ಜಿಲ್ಲೆ ಶೈಕ್ಷಣಿಕವಾಗಿ ತೀರಾ ಹಿಂದುಳಿದಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕೂಡ ನಿಷ್ಕ್ರಿಯ ಗೊಂಡಿರುವುದು ಜಿಲ್ಲೆಯಮಟ್ಟಿದೆ ದುರದೃಷ್ಟಕರ.

ಕೂಡಲೇ ಜಿಲ್ಲಾಧಿಕಾರಿ ಯಾದಗಿರಿ ಪ್ರತ್ಯೇಕ ವಿವಿ ಸ್ಥಾಪನೆಗಾಗಿ ಸರ್ಕಾರಕ್ಕೆ ಪ್ರಸ್ತಾವ ಕಳು ಹಿಸಬೇಕು. ಜಿಲ್ಲೆಯ ಅಭಿ ವೃದ್ಧಿಗೆ ಶ್ರಮಿಸಬೇಕಾಗಿರುವ ಅಧಿ ಕಾರಿ ವರ್ಗ, ಜನಪ್ರತಿನಿಧಿಗಳು ಯಾದ ಗಿರಿಯನ್ನು ಮೊದಲು ಶೈಕ್ಷ ಣಿಕವಾಗಿ ಅಭಿವೃದ್ಧಿಯತ್ತ ಕೊಂಡೊ ಯ್ಯುವ ಯೋಜನೆಗಳನ್ನು ರೂಪಿಸಬೇಕು’ ಎಂದು ಅವರು ಒತ್ತಾಯಿಸಿದರು.
‘ಜಿಲ್ಲೆಯಲ್ಲಿ ಭೀಮಾ ಮತ್ತು ಕೃಷ್ಣಾ ನದಿಗಳು ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಅಲ್ಲದೇ ವಿವಿ ಸ್ಥಾಪನೆಗೆ ಬೇಕಾಗುವ ಜಮೀನು ಸಹ ಸೌಲಭ್ಯವಿದೆ.
ಅದಕ್ಕಾಗಿ ಹಿಂದುಳಿದ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸುವಂತೆ ಜ.10ರಂದು ಕರವೇ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ’ ಎಂದು ಭೀಮು ನಾಯಕ ತಿಳಿಸಿದರು.
ಕರವೇ ತಾಲ್ಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ಭೀಮಾಶಂಕರ ಹತ್ತಿಕುಣಿ, ಸಿದ್ದುನಾಯಕ ಹತ್ತಿಕುಣಿ, ಅಬ್ದುಲ್ ಚಿಗಾನೂರ, ಮಲ್ಲು ದೇವಕರ್, ಬಸು ನಾಯಕ್ ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.