ADVERTISEMENT

ರಸ್ತೆ ಮೇಲೆ ಹರಿಯುವ ಚರಂಡಿ ನೀರು

ಯಕ್ತಾಪುರ ಗ್ರಾಮದಲ್ಲಿ ಮೂಲ ಸೌಕರ್ಯ ಕೊರತೆ, ಗ್ರಾಮಸ್ಥರ ಪರದಾಟ

ಪವನ ಕುಲಕರ್ಣಿ
Published 24 ಜನವರಿ 2017, 9:24 IST
Last Updated 24 ಜನವರಿ 2017, 9:24 IST
ರಸ್ತೆ ಮೇಲೆ ಹರಿಯುವ ಚರಂಡಿ ನೀರು
ರಸ್ತೆ ಮೇಲೆ ಹರಿಯುವ ಚರಂಡಿ ನೀರು   

ಕೆಂಭಾವಿ: ಸುರಪುರ ತಾಲ್ಲೂಕಿನ ಗಡಿ ಗ್ರಾಮವಾದ ಯಕ್ತಾಪುರ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ಪ್ರತಿನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.ಗ್ರಾಮದಲ್ಲಿ 4.5 ಸಾವಿರ ಜನಸಂಖ್ಯೆ ಇದೆ. ಆದರೆ, ಗ್ರಾಮದಲ್ಲಿ ಚರಂಡಿ, ಕುಡಿ ಯುವ ನೀರು, ರಸ್ತೆ, ಶೌಚಾ ಲಯಗಳ ವ್ಯವಸ್ಥೆ ಇಲ್ಲ.

ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತದೆ. ದುರ್ನಾತದಿಂದಾಗಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡ ಬೇಕಾದ ಪರಿಸ್ಥಿತಿ ಇದೆ.

ಗ್ರಾಮದ ಮುಖ್ಯರಸ್ತೆಯ ಎರಡೂ ಬದಿ ತಿಪ್ಪೆಗುಂಡಿಗಳನ್ನು ಹಾಕಲಾಗಿದೆ. ತಿಪ್ಪೆಗಳು ರಸ್ತೆಯನ್ನು ಆವರಿ ಸಿಕೊಂಡಿದ್ದು, ಇಡೀ ಪ್ರದೇಶ ಗಬ್ಬೆದ್ದು ನಾರುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾ ಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಒಳರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ರಸ್ತೆಯಲ್ಲಿ ಗುಂಡಿ ಗಳು ಬಿದ್ದಿರುವುದರಿಂದ ಸಂಚಾ ರಕ್ಕೆ ತೊಂದರೆಯಾಗುತ್ತಿದ್ದು, ವಾಹನ ಸವಾರರು ಹರಸಾಹಸ ಪಡಬೇಕಾಗಿದೆ.

ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಸೊಳ್ಳೆ, ನೊಣಗಳ ಕಾಟದಿಂದಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ಕಾಯಿಲೆಗಳ ಭೀತಿ ಎದುರಾಗಿದೆ. ಸಂಬಂಧಪಟ್ಟ ಅಧಿ ಕಾರಿಗಳು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇದ್ದು, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ವಿದ್ಯಾರ್ಥಿಗಳು ಸ್ವತಃ ಅವರೇ ಕೊಳವೆ ಭಾವಿಯಿಂದ  ನೀರು ತರಬೇಕಾಗಿದೆ. ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ ಎನ್ನುತ್ತಾರೆ ಪಾಲಕರು.

ಗ್ರಾಮದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಇದರಿಂದ ಗ್ರಾಮಸ್ಥರು ಪರ ದಾಡುವಂತಾಗಿದ್ದು, ಕೂಡಲೇ ಶೌಚಾ ಲಯಗಳನ್ನು ನಿರ್ಮಿಸ ಬೇಕು.ಅಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ತೊಂದರೆ ಅನು ಭವಿಸುತ್ತಿದ್ದಾರೆ ಎಂದು ಗ್ರಾಮದ ಹಣ ಮಂತರಾಯ ಜಿ ಹೊಸ ಮನಿ ಹೇಳಿದರು.

ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊ ಳ್ಳಬೇಕು. ಇಲ್ಲದಿದ್ದರೆ ಹೋರಾಟ ನಡೆ ಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಜಗ ದೀಶ ಎಸ್‌.ಯಕ್ತಾಪು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.