ADVERTISEMENT

ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಲಿಸಿದ ಡಿ.ಸಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2017, 9:16 IST
Last Updated 22 ಮಾರ್ಚ್ 2017, 9:16 IST

ಯಾದಗಿರಿ:  ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಮಂಗಳವಾರ ಜಿಲ್ಲಾಧಿಕಾರಿ ಖುಷ್ಬೂ ಗೋಯಲ್ ಚೌಧರಿ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಆಲಿಸಿ, ಹಲವು ಕಾಮಗಾರಿಗಳ ಪರಿಶೀಲಿಸಿದರು.

ಗುರುಮಠಕಲ್ ತಾಲ್ಲೂಕಿನ ಯಂಪಾಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಜನರಿಂದ ಆಲಿಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಗುರುಮಠಕಲ್ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿದ ಅವರು ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ಅಲ್ಲಿಂದ ಕಾಳಬೆಳಗುಂದಿ ಗ್ರಾಮಕ್ಕೆ ಭೇಟಿ ನೀಡಿ ಶಾಲಾ ಕಟ್ಟಡ ಕಾಮಗಾರಿಯನ್ನು ಇನ್ನೆರಡು ತಿಂಗಳಿನ ಒಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಗುರುಮಠಕಲ್‌ದಿಂದ ಪುಟಪಾಕ್ ಗ್ರಾಮಕ್ಕೆ ಎನ್‌ಸಿಆರ್‌ಎಫ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು , ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.