ADVERTISEMENT

ಅಪವಿತ್ರ ಮೈತ್ರಿ ಖಂಡಿಸಿ ಬಿಜೆಪಿಯಿಂದ ನಾಳೆ ‘ಜನಮತ ವಿರೋಧಿ ದಿನ’ ಆಚರಣೆ

​ಪ್ರಜಾವಾಣಿ ವಾರ್ತೆ
Published 22 ಮೇ 2018, 14:40 IST
Last Updated 22 ಮೇ 2018, 14:40 IST
ಅಪವಿತ್ರ ಮೈತ್ರಿ ಖಂಡಿಸಿ ಬಿಜೆಪಿಯಿಂದ ನಾಳೆ ‘ಜನಮತ ವಿರೋಧಿ ದಿನ’ ಆಚರಣೆ
ಅಪವಿತ್ರ ಮೈತ್ರಿ ಖಂಡಿಸಿ ಬಿಜೆಪಿಯಿಂದ ನಾಳೆ ‘ಜನಮತ ವಿರೋಧಿ ದಿನ’ ಆಚರಣೆ   

ಬೆಂಗಳೂರು: ಅಪವಿತ್ರ ಮೈತ್ರಿ ಸರ್ಕಾರ ರಚನೆಯನ್ನು ಖಂಡಿಸಿ ಬಿಜೆಪಿಯು ಮೇ23ರಂದು ಬೆಳಿಗ್ಗೆ ರಾಜ್ಯಾದ್ಯಂತ ಜನಮತ ವಿರೋಧಿ ದಿನ ಆಚರಿಸಲಿದೆ.

ಬೆಂಗಳೂರಿನಲ್ಲಿ ಬೆಳಿಗ್ಗೆ 11.15ಕ್ಕೆ ನಗರದ ಆನಂದರಾವ್‌ ವೃತ್ತದ ಮೌರ್ಯ ಹೋಟೆಲ್‌ ಬಳಿಯ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಭಟನೆ ನೇತೃತ್ವ ವಹಿಸುವರು.

ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ, ಎನ್.ರವಿಕುಮಾರ್, ಸಂಸದರಾದ ಪಿ.ಸಿ. ಮೋಹನ್, ಬೆಂಗಳೂರು ಮಹಾನಗರ ಬಿಜೆಪಿ ಅಧ್ಯಕ್ಷರಾದ ಪಿ.ಎನ್.ಸದಾಶಿವ, ಪದಾಧಿಕಾರಿಗಳು, ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಭಾಗವಹಿಸುವರು ಎಂದು ಪಕ್ಷದ ರಾಜ್ಯ ಘಟಕದ ಮಾಧ್ಯಮ ಸಂಚಾಲಕ ಎಸ್.ಶಾಂತಾರಾಮ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.