ADVERTISEMENT

ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

ಏಜೆನ್ಸೀಸ್
Published 8 ಏಪ್ರಿಲ್ 2018, 14:42 IST
Last Updated 8 ಏಪ್ರಿಲ್ 2018, 14:42 IST
ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ
ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ   

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಳ ಲೆಕ್ಕ ಆರಂಭವಾಗಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ.

ಚುನಾವಣಾ ಕಣಕ್ಕಿಳಿಸಲು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಕ್ಷದ ಮುಖ್ಯ ಕಚೇರಿಯಲ್ಲಿ ಭಾನುವಾರ ಸಭೆ ನಡೆಸುತ್ತಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸುತ್ತಿದೆ.

ADVERTISEMENT

ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಅಮಿತ್‌ ಶಾ, ಯಡಿಯೂರಪ್ಪ ಸೇರಿದಂತೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚವ್ಹಾಣ್‌, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌,  ಸಂಸದ ಅನಂತಕುಮಾರ್‌, ಪೀಯೂಷ್ ಗೋಯಲ್, ಸಂತೋಷ್ ಹಾಗೂ ಸಮಿತಿ ಸದಸ್ಯರು ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.