ADVERTISEMENT

ದೇವರು, ರೈತರ ಹೆಸರಿನಲ್ಲಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 17 ಮೇ 2018, 4:31 IST
Last Updated 17 ಮೇ 2018, 4:31 IST
ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು. ಚಿತ್ರ: ಎಎನ್‌ಐ ಟ್ವೀಟ್‌
ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು. ಚಿತ್ರ: ಎಎನ್‌ಐ ಟ್ವೀಟ್‌   

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಹಸಿರು ಶಾಲು ಹೊದ್ದು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ದೇವರು ಮತ್ತು ರೈತರ ಹೆಸರಿನಲ್ಲಿ ಅವರು ಪ್ರಮಾಣ ಸ್ವೀಕರಿಸಿದರು.

ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ADVERTISEMENT

ಹೂಗುಚ್ಚ ನೀಡುವ ಮೂಲಕ ಯಡಿಯೂರಪ್ಪ ಅವರಿಗೆ ವಜುಭಾಯಿ ವಾಲ ಅವರು ಶುಭ ಕೋರಿದರು.

ಈ ಮೂಲಕ ಯಡಿಯೂರಪ್ಪ ಅವರು 23ನೇ ಮುಖ್ಯಮಂತ್ರಿಯಾಗಿ ಹಾಗೂ ಮೂರನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.