ADVERTISEMENT

ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಮೇಲುಗೈ

​ಪ್ರಜಾವಾಣಿ ವಾರ್ತೆ
Published 15 ಮೇ 2018, 10:05 IST
Last Updated 15 ಮೇ 2018, 10:05 IST
ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಮೇಲುಗೈ
ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್‌ ಮೇಲುಗೈ   

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಐದು ಸ್ಥಾನ ಗೆಲ್ಲುವ ಮೂಲಕ ಜೆಡಿಎಸ್‌ ಮೇಲುಗೈ ಸಾಧಿಸಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ತಲಾ ಮೂರು ಸ್ಥಾನ ಗಳಿಸಿವೆ.

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿಗಳು ಮುಖಭಂಗ ಅನುಭವಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತರೆ, ತಿ.ನರಸೀಪುರದಲ್ಲಿ ಸಚಿವ ಡಾ.ಎಸ್‌.ಸಿ.ಮಹದೇವಪ್ಪ ಮುಗ್ಗರಿಸಿದ್ದಾರೆ.

ಜೆಡಿಎಸ್‌ನ ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿಯಲ್ಲಿ ಭಾರಿ ಅಂತರದಿಂದ ಗೆಲ್ಲುವ ಮೂಲಕ ಪುನರಾಯ್ಕೆಯಾಗಿದ್ದಾರೆ.

ADVERTISEMENT

ಹುಣಸೂರಿನಲ್ಲಿ ಜೆಡಿಎಸ್‌ನ ಎಚ್‌.ವಿಶ್ವನಾಥ್‌, ನಂಜನಗೂಡಿನಲ್ಲಿ ವಿ.ಶ್ರೀನಿವಾಸಪ್ರಸಾದ್‌ ಅಳಿಯ ಬಿಜೆಪಿಯ ಬಿ.ಹರ್ಷವರ್ಧನ್‌, ತಿ.ನರಸೀಪುರದಲ್ಲಿ ಜೆಡಿಎಸ್‌ನ ಎಂ.ಅಶ್ವಿನ್‌ ಕುಮಾರ್‌ ಗೆಲುವು ಸಾಧಿಸಿದರು.

ಕೃಷ್ಣರಾಜದಲ್ಲಿ ಕಾಂಗ್ರೆಸ್‌ನ ಎಂ.ಕೆ.ಸೋಮಶೇಖರ್‌ ಅವರನ್ನು ಮಣಿಸುವಲ್ಲಿ ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಎಸ್‌.ಎ.ರಾಮದಾಸ್‌ ಯಶಸ್ವಿಯಾಗಿದ್ದಾರೆ. ಚಾಮರಾಜದಲ್ಲಿ ಕಾಂಗ್ರೆಸ್‌ನ ವಾಸುಗೆ ಬಿಜೆಪಿಯ ಎಲ್‌.ನಾಗೇಂದ್ರ ಆಘಾತ ನೀಡಿದ್ದಾರೆ.

ನರಸಿಂಹರಾಜ ಕ್ಷೇತ್ರದಲ್ಲಿ ಸತತ ಐದನೇ ಬಾರಿ ಗೆಲುವು ಸಾಧಿಸುವಲ್ಲಿ ಕಾಂಗ್ರೆಸ್‌ನ ತನ್ವೀರ್‌ ಸೇಠ್‌ ಯಶಸ್ವಿಯಾಗಿದ್ದಾರೆ. ವರುಣಾದಲ್ಲಿ ಕಾಂಗ್ರೆಸ್‌ನ ಡಾ.ಯತೀಂದ್ರ ಚೊಚ್ಚಲ ಯತ್ನದಲ್ಲೇ ಗೆಲುವು ಸಾಧಿಸಿದರು. ಎಚ್‌.ಡಿ.ಕೋಟೆ ಕ್ಷೇತ್ರದಲ್ಲಿ ಚಿಕ್ಕಮಾದು ಪುತ್ರ ಕಾಂಗ್ರೆಸ್‌ನ ಅನಿಲ್ ಚಿಕ್ಕಮಾದು ಜಯ ಗಳಿಸಿದರು.  ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್‌ನ ಕೆ.ವೆಂಕಟೇಶ್‌ ಮುಗ್ಗರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.