ADVERTISEMENT

ರಾಜಕಾರಣಿಗಳ ನಾಲಿಗೆಗೆ ಹಿಡಿತವಿರಲಿ: ಸಾಣೆಹಳ್ಳಿ ಶ್ರೀ

​ಪ್ರಜಾವಾಣಿ ವಾರ್ತೆ
Published 27 ಮೇ 2018, 19:30 IST
Last Updated 27 ಮೇ 2018, 19:30 IST
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ   

ಶಿವಮೊಗ್ಗ: ‘ಈಚೆಗೆ ರಾಜಕಾರಣಿಗಳು ನಾಲಿಗೆಗೆ ಹಿಡಿತವಿಲ್ಲದೇ ಮಾತನಾಡುತ್ತಾರೆ. ನಂತರ ಅವರು ಆಡಿದ ಮಾತುಗಳ ಬಗ್ಗೆ ಯೋಚಿಸುತ್ತಾರೆ. ಹಾಗೆಯೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಈಚೆಗೆ ನಾಲಿಗೆ ಹರಿಬಿಟ್ಟು ಮಾತನಾಡಿದ್ದರು‌’ ಎಂದು ತರಳಬಾಳು ಶಾಖಾ ಮಠದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಕುವೆಂಪು ರಂಗಮಂದಿರದಲ್ಲಿ ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘವು ಭಾನುವಾರ ಹಮ್ಮಿಕೊಂಡಿದ್ದ ಬಸವ ಸ್ಮರಣೆ ಮತ್ತು ಶರಣ ಚಿಂತನಾ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾವು ಮಾತನಾಡುವಾಗ ಯಾರಿಗೂ ನೋವಾಗದಂತೆ ಆಲೋಚಿಸಿ ಮಾತನಾಡಬೇಕು. ಅದಕ್ಕಾಗಿ ನಾಲಿಗೆಯನ್ನು ಶುದ್ಧವಾಗಿಟ್ಟುಕೊಳ್ಳಬೇಕು. ನಾಲಿಗೆ ಹರಿಬಿಟ್ಟು ಮಾತನಾಡುವುದರಿಂದ ನಮ್ಮ ಘನತೆಗೆ ಧಕ್ಕೆ ಬರುತ್ತದೆ. ಎಚ್.ಡಿ.ಕುಮಾರಸ್ವಾಮಿ ಆಡಿದ ಮಾತುಗಳ ಬಗ್ಗೆ ವಿವರವಾಗಿ ಹೇಳುವುದು ಬೇಡ’ ಎಂದು ವ್ಯಂಗ್ಯವಾಡಿದರು.

ADVERTISEMENT

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಶ್ರೀಗಳ ಹೇಳಿಕೆಯನ್ನು ಖಂಡಿಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀಗಳು ಸ್ಪಷ್ಟನೆ ನಿಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.