ಮುಂಬೈ: ಹೋಮೀ ಅದಜಾನಿಯಾ ಅವರ ಮುಂದಿನ ಚಿತ್ರ ‘ತಕದುಮ್’ ನಲ್ಲಿ ಇರ್ಫಾನ್ ಖಾನ್ ಅವರ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿರುವ ನಟಿ ಪರಿಣಿತಿ ಚೋಪ್ರಾ ಪುಳಕಗೊಂಡಿದ್ದಾರೆ.
‘ಇರ್ಫಾನ್ ಖಾನ್ ಅವರಂತಹ ಮೇರು ನಟರೊಂದಿಗೆ ನಟಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ, ಅವರೊಡನೆ ತೆರೆ ಮೇಲೆ ಕಾಣಿಸಿಕೊಳ್ಳುವ ಕ್ಷಣವನ್ನು ಕಾತರದಿಂದ ಎದುರುನೋಡುತ್ತಿದ್ದೇನೆ. ಜೊತೆಗೆ ಮನದಲ್ಲಿ ಕೊಂಚ ಭಯವೂ ಕಾಡುತ್ತಿದೆ’ ಎಂದು ನಟಿ ಪರಿಣಿತಿ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಜೊತೆಗೆ ‘ಶುದ್ದ್ ದೇಸಿ ರೊಮ್ಯಾನ್ಸ್’ ಚಿತ್ರದ ನಂತರ ಮತ್ತೊಮ್ಮೆ ಸುಶಾಂತ್ ಸಿಂಗ್ ರಜಪೂತ್ ಅವರೊಡನೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಚಿತ್ರ ನವೆಂಬರ್ ನಲ್ಲಿ ಚಿತ್ರೀಕರಣ ಆರಂಭಿಸಲಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.