ADVERTISEMENT

ಕುತೂಹಲ ಕೆರಳಿಸಿದ ‘ಟಗರು’ ಟೀಸರ್‌

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2017, 11:14 IST
Last Updated 8 ನವೆಂಬರ್ 2017, 11:14 IST
ಕುತೂಹಲ ಕೆರಳಿಸಿದ ‘ಟಗರು’ ಟೀಸರ್‌
ಕುತೂಹಲ ಕೆರಳಿಸಿದ ‘ಟಗರು’ ಟೀಸರ್‌   

ಬೆಂಗಳೂರು: ಸೂರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ 'ಟಗರು'. ಮಂಗಳವಾರ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಮಾ ಪ್ರಿಯರ ಕುತೂಹಲ ಹೆಚ್ಚಿಸಿದೆ.

ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿರುವ ಟೀಸರ್ ಈವರೆಗೂ 1.35 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. 

ಕೆ.ಪಿ.ಶ್ರೀಕಾಂತ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶಿವರಾಜ್‌ಕುಮಾರ್‌, ಭಾವನಾ, ಮಾನ್ವಿತಾ ಹರೀಶ್‌, ಧನಂಜಯ ಹಾಗೂ ವಸಿಷ್ಠ ಸಿಂಹ ಸೇರಿ ಹಲವು ಕಲಾವಿದರ ಅಭಿನಯವಿದೆ. 

ADVERTISEMENT

ಚರಣ್‌ ರಾಜ್‌ ಸಂಗೀತ ಸಂಯೋಜಿಸಿದ್ದು, ಮಾಹೇನ್‌ ಸಿಂಹ ಛಾಯಾಗ್ರಹಣ ಮಾಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.