ಮುಂಬೈ: ಗುಳಿಕೆನ್ನೆಯ ಬೆಡಗಿ ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್ ಸಿಂಗ್ ಮದುವೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 19ರಂದು ಮುಂಬೈನಲ್ಲಿ ಲಗ್ನ ನಡೆಯಲಿದೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
‘ಪದ್ಮಾವತ್’ ಸಿನಿಮಾದಲ್ಲಿ ಕಮಾಲ್ ಮಾಡಿದ್ದ ಈ ಜೋಡಿ ಮದುವೆ ಕುರಿತು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.
ವಿವಾಹದ ಕಾರಣ ದೀಪಿಕಾ ಹೊಸ ಸಿನಿಮಾಗಳಿಗೆ ಒಪ್ಪಿಗೆ ಸೂಚಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.