ಮುಂಬೈ: ‘ನಾನು ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ‘ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹೇಳಿದ್ದಾರೆ.
ಬಹುರಾಷ್ಟ್ರೀಯ ಕಂಪೆನಿಗಳು ದುಬಾರಿ ಬೆಲೆಗೆ ನ್ಯಾಪ್ಕಿನ್ಗಳನ್ನು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಕೇವಲ ₹3ಕ್ಕೆ ನ್ಯಾಪ್ಕಿನ್ ಸಿದ್ಧಪಡಿಸಿ ಮಾರಾಟ ಮಾಡುವ ಮೂಲಕ ಗ್ರಾಮೀಣ ಮಹಿಳೆಯರಿಗೆ ನೆರವಾದ ತಮಿಳುನಾಡಿನ ಉದ್ಯಮಿಯೊಬ್ಬರ ಜೀವನ ಚರಿತ್ರೆ ಆಧಾರಿತ ಚಿತ್ರ ‘ಪದ್ಮಾನ್’ ನಲ್ಲಿ ಅಕ್ಷಯ್ ನಟಿಸುತ್ತಿದ್ದಾರೆ.
ಆರ್. ಭಾಲ್ಕಿ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ಅಕ್ಷಯ್ ಮಾಧ್ಯಮಗಳೊಂದಿಗೆ ಈ ರೀತಿ ಮಾತನಾಡಿದ್ದಾರೆ.
ಸದ್ಯ ಚಿತ್ರೀಕರಣದಲ್ಲಿ ವ್ಯಸ್ತರಾಗಿರುವ ಅಕ್ಷಯ್, ಈ ಚಿತ್ರದ ಕತೆ ತಮ್ಮ ಪತ್ನಿ ಟ್ವಿಂಕಲ್ ಖನ್ನಾರನ್ನು ಅತಿಯಾಗಿ ಆಕರ್ಷಿಸಿತ್ತು ಎಂದೂ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.