ADVERTISEMENT

ರಾಜಕೀಯ ಪ್ರವೇಶ: ಅಮಿತಾಭ್ ಬಚ್ಚನ್ ಜತೆ ರಜನಿಕಾಂತ್ ಮಾತುಕತೆ ಸಾಧ್ಯತೆ

ಏಜೆನ್ಸೀಸ್
Published 28 ಜೂನ್ 2017, 9:20 IST
Last Updated 28 ಜೂನ್ 2017, 9:20 IST
ರಜನಿಕಾಂತ್ (ಸಾಂದರ್ಭಿಕ ಚಿತ್ರ)
ರಜನಿಕಾಂತ್ (ಸಾಂದರ್ಭಿಕ ಚಿತ್ರ)   

ನವದೆಹಲಿ: ರಾಜಕೀಯ ಸೇರುವ ಬಗ್ಗೆ ಇತ್ತೀಚೆಗೆ ಸುಳಿವು ನೀಡಿರುವ ನಟ ರಜನಿಕಾಂತ್ ಈ ವಿಷಯದ ಬಗ್ಗೆ ಚರ್ಚಿಸಲು ಬಾಲಿವುಡ್‌ನ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರನ್ನು ಶೀಘ್ರದಲ್ಲೇ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಜನಿಕಾಂತ್ ಅವರು ರಾಜಕೀಯ ಪ್ರವೇಶಿಸುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ. ಆದರೆ, ಅವರ ಕುಟುಂಬದವರು ಆ ಬಗ್ಗೆ ಒಲವು ಹೊಂದಿಲ್ಲ ಎಂದು ರಜನಿ ಅವರ ಆಪ್ತ ಮೂಲಗಳು ತಿಳಿಸಿವೆ ಎನ್ನಲಾಗಿದೆ.

ರಜನಿ ಅವರು ರಾಜಕೀಯ ಸೇರುವ ಬಗ್ಗೆ ಬಹಳ ಉತ್ಸುಕರಾಗಿದ್ದಾರೆ. ಆದರೆ, ಅವರ ಕುಟುಂಬದವರು ಅದನ್ನು ವಿರೋಧಿಸುತ್ತಿದ್ದಾರೆ. ಕುಟುಂಬದವರು ಅಮಿತಾಭ್ ಬಚ್ಚನ್ ಅವರನ್ನು ಉದಾಹರಿಸಿ ರಾಜಕೀಯ ಪ್ರವೇಶಿಸದಂತೆ ರಜನಿ ಅವರಿಗೆ ತಿಳಿಹೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಡಿಎನ್‌ಎ ವೆಬ್‌ಸೈಟ್ ವರದಿ ಮಾಡಿದೆ.

ADVERTISEMENT

ತಿಂಗಳ ಹಿಂದೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದ ಸಂದರ್ಭದಲ್ಲಿ ರಾಜಕೀಯ ಸೇರುವ ಬಗ್ಗೆ ಒಲವು ಹೊಂದಿರುವುದಾಗಿ ರಜನಿಕಾಂತ್ ತಿಳಿಸಿದ್ದರು. ಆದರೆ, ಭವಿಷ್ಯದ ಬಗ್ಗೆ ಈಗಲೇ ಏನೂ ಹೇಳಲಾರೆ ಎಂದೂ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.