ADVERTISEMENT

‘ರಾಜಕುಮಾರ’ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2017, 11:26 IST
Last Updated 10 ಏಪ್ರಿಲ್ 2017, 11:26 IST
‘ರಾಜಕುಮಾರ’ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
‘ರಾಜಕುಮಾರ’ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣಾ ಪ್ರಚಾರ ಮುಗಿದ ಬಳಿಕ ಭಾನುವಾರ ಮೈಸೂರಿನಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಅಭಿನಯದ ‘ರಾಜಕುಮಾರ’ ಚಿತ್ರ ವೀಕ್ಷಿಸಿದ್ದರು. ಚಿತ್ರದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ನಟನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಸೋಮವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ‘ರಾಜಕುಮಾರ’ ಚಿತ್ರದ ನಾಯಕ ಪುನೀತ್ ರಾಜಕುಮಾರ್‌, ನಿರ್ದೇಶಕ ಸಂತೋಷ್‌ ಆನಂದ್‌ರಾಮ್‌, ಹಾಗೂ ನಿರ್ಮಾಪಕ ವಿಜಯ್‌ ಕಿರಂಗದ್ದೂರು ಅವರನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.