ಮುಂಬೈ (ಐಎಎನ್ಎಸ್): ‘ಮಾಜಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧಿತರಾಗಿದ್ದ ಬಾಲಿವುಡ್ ಹಿನ್ನೆಲೆ ಗಾಯಕ ಅಂಕಿತ್ ತಿವಾರಿ ಅವರನ್ನು ಮೇ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಅವರ ವಕೀಲ ನಾಗೇಶ್ ಮಿಶ್ರಾ ತಿಳಿಸಿದ್ದಾರೆ.
‘ಅಂಕಿತ್ ಅವರ ಮೊಬೈಲ್ ಮತ್ತು ಕೆಲವು ಬಟ್ಟೆಗಳನ್ನು ವಶಪಡಿಸಿಕೊಳ್ಳಬೇಕಾಗಿರುವುದರಿಂದ ಅವರನ್ನು ಪೊಲೀಸ್ ವಶಕ್ಕೆ ಒಪ್ಪಿಸುವಂತೆ ಸರ್ಕಾರಿ ಪರ ವಕೀಲರು ಮನವಿ ಮಾಡಿದ್ದರು. ರೈಲ್ವೆ ಸಂಚಾರಿ ಕೋರ್ಟ್ ಮ್ಯಾಜಿಸ್ಟ್ರೇಟ್ ಎಸ್.ಸಿ. ಜಾಧವ್ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ’ ಎಂದು ಅವರು ವಿವರಿಸಿದ್ದಾರೆ.
ಮುಂಬೈ ಪೊಲೀಸರು ಅಂಕಿತ್ ಅವರನ್ನು ಮೇ 8 ರಂದು ಬಂಧಿಸಿದ್ದರು. ಮೇ 12ರವರೆಗೆ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.