ADVERTISEMENT

ಅಖಿಲೇಶ್‌ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 3 ಜೂನ್ 2014, 19:30 IST
Last Updated 3 ಜೂನ್ 2014, 19:30 IST

ಲಖನೌ (ಪಿಟಿಐ): ಬದಾಯೂಂನಲ್ಲಿ ಇಬ್ಬರು ದಲಿತ ಸಹೋದರಿಯರ ಮೇಲೆ ಅತ್ಯಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಮಾಧ್ಯಮಗಳು  ದೇಶದಾದ್ಯಂತ ಅತಿ­ಯಾದ ಪ್ರಚಾರ ನೀಡಿದವು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿ­ಲೇಶ್‌ ಯಾದವ್‌ ಆರೋಪಿಸಿದ್ದಾರೆ.

ಬದಾಯೂಂ ಆಗಿರಲಿ, ಅಥವಾ ಬೇರೆ ಪ್ರಕರಣಗ­ಳಾಗಿರಲಿ. ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂ­ಡಿದೆ ಎಂದು ಅಖಿಲೇಶ್‌ ಹೇಳಿದ್ದಾರೆ.

‘ಇಂತಹ ಘಟನೆಗಳು ಉತ್ತರ ಪ್ರದೇಶದಲ್ಲಿ ಮಾತ್ರ ನಡೆಯುವುದಲ್ಲ ಎಂಬುದನ್ನು ನಾನು ಹಲವು ಬಾರಿ ಹೇಳಿದ್ದೇನೆ. ಆದರೆ ರಾಜ್ಯದಲ್ಲಿ ನಡೆಯುವ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ದೊರಕುತ್ತದೆ’ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ನಡೆದ ಇಂತಹ ಘಟನೆಯನ್ನು ರಾಷ್ಟ್ರೀಯ ಸುದ್ದಿವಾಹಿನಿ­ಗಳು ಪ್ರಸಾರ ಮಾಡಿವೆಯೇ ಎಂದು ಅಖಿಲೇಶ್‌ ಪ್ರಶ್ನಿಸಿದರು.

ರಾಜಸ್ತಾನ, ಮಧ್ಯಪ್ರದೇಶಗಳಲ್ಲಿಯೂ ಇಂತಹ ಘಟನೆಗಳು ನಡೆಯುತ್ತವೆ ಎಂದು ಅವರು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.