ADVERTISEMENT

'ಅಚ್ಚೇ ದಿನ್' ಸರ್ಕಾರಿ ಜಾಹೀರಾತುಗಳಿಗೆ ಮಾತ್ರ ಸೀಮಿತವಾಗಿದೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2017, 14:04 IST
Last Updated 23 ಜುಲೈ 2017, 14:04 IST
'ಅಚ್ಚೇ ದಿನ್' ಸರ್ಕಾರಿ ಜಾಹೀರಾತುಗಳಿಗೆ ಮಾತ್ರ ಸೀಮಿತವಾಗಿದೆ
'ಅಚ್ಚೇ ದಿನ್' ಸರ್ಕಾರಿ ಜಾಹೀರಾತುಗಳಿಗೆ ಮಾತ್ರ ಸೀಮಿತವಾಗಿದೆ   

ಮುಂಬೈ: ಅಚ್ಚೇ ದಿನ್ ಎಂದು ಸರ್ಕಾರಿ ಜಾಹೀರಾತುಗಳಿಗೆ ಮಾತ್ರ ಸೀಮಿತವಾಗಿದೆ, ವಾಸ್ತವ ಸಂಗತಿ ಬೇರೆಯೇ ಇದೆ ಎಂದು ಶಿವಸೇನೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಕೇಂದ್ರ ಸರ್ಕಾರದ ನೋಟು ರದ್ದತಿ, ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಬಗ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ, ಎನ್‍ಡಿಎ ಸರ್ಕಾರದಲ್ಲಿ ಮೈತ್ರಿ ಪಕ್ಷವಾಗಿದ್ದರೂ ಯಾವುದು ಸರಿ ಇಲ್ಲವೋ ಅದರ ಬಗ್ಗೆ ಹೇಳಲು ತಾನು ಹಿಂಜರಿಯುವುದಿಲ್ಲ ಎಂದಿದ್ದಾರೆ.

ಕಳೆದ ನಾಲ್ಕು ತಿಂಗಳಲ್ಲಿ ಸುಮಾರು 15 ಲಕ್ಷ ಜನರು ಕೆಲಸ ಕಳೆದುಕೊಂಡಿದ್ದಾರೆ. ಹೀಗೆ ಕೆಲಸ ಕಳೆದುಕೊಂಡವರಿಗೆ ಸರ್ಕಾರ ಏನು ಮಾಡುತ್ತಿದೆ ಎಂದು ಶಿವಸೇನೆ ಮುಖವಾಣಿಯಲ್ಲಿ ಠಾಕ್ರೆ ಪ್ರಶ್ನಿಸಿದ್ದಾರೆ.

ADVERTISEMENT

ಅಚ್ಚೇ ದಿನ್ ಜಾಹೀರಾತಿನಲ್ಲಿ ಮಾತ್ರ ಕಾಣುತ್ತಿದೆ.ದೇಶದ ಎಲ್ಲ ವ್ಯವಹಾರಗಳು ಪ್ರಧಾನಿ ಮೋದಿಯವರು ಹೇಳಿದಂತೆಯೇ ನಡೆಯುವುದಾದರೆ ಇಲ್ಲಿ ನಿಜವಾದ ಪ್ರಜಾಪ್ರಭುತ್ವ ಎಂಬುದು ಇದೆಯೇ? ಕೇಂದ್ರದಲ್ಲಿ ಕುಳಿತು ಮೋದಿ ಎಲ್ಲವನ್ನೂ ನಿಯಂತ್ರಿಸುತ್ತಿದ್ದಾರೆ, ಅವರು ರಾಜ್ಯಗಳ ಸ್ವಾತಂತ್ರ್ಯವನ್ನೂ ಕಿತ್ತುಕೊಂಡಿದ್ದಾರೆ ಎಂದು ಠಾಕ್ರೆ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.