ನವದೆಹಲಿ (ಐಎಎನ್ಎಸ್): ವಕೀಲೆಯೊಬ್ಬರ ಮೇಲೆ ಆಕೆಯ ಪತಿಯ ಸಂಬಂಧಿಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮಕೈಗೊಂಡಿರುವ ಕುರಿತ ವರದಿ ಸೇರಿದಂತೆ ಎಲ್ಲ ದಾಖಲೆಗಳನ್ನು ಸಲ್ಲಿಸಬೇಕು ಎಂದು ಛತ್ತೀಸ್ಗಡ ಸಿಜೆಎಂ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಘಟನೆಯಿಂದ ನೊಂದ ವಕೀಲೆ ಸುಪ್ರೀಂಕೋರ್ಟ್ ಆವರಣದಲ್ಲಿ ಸೋಮವಾರ ಆತ್ಮಹತ್ಯೆಗೆ ಯತ್ನಿಸಿದ್ದರು.
ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈ ಮಹಿಳೆಗೆ ಭದ್ರತೆ ಒದಗಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ನೇತೃತ್ವದ ಪೀಠ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.