ADVERTISEMENT

ಅಧಿಕಾರಿಗಳ ಜತೆ ರಾಜ್ಯಪಾಲ ಚರ್ಚೆ

ಬಿಗಿ ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜನೆ, ಗಣ್ಯರ ನಿವಾಸಗಳಿಗೆ ಭದ್ರತೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2014, 19:30 IST
Last Updated 27 ಸೆಪ್ಟೆಂಬರ್ 2014, 19:30 IST

ಚೆನ್ನೈ (ಪಿಟಿಐ): ಅಕ್ರಮ ಸಂಪತ್ತು ಗಳಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀರ್ಪು ಹೊರ ಬೀಳುತ್ತಲೇ ಶನಿವಾರ ತಮಿಳುನಾಡಿ-ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ರಾಜ್ಯಪಾಲ ಕೆ. ರೋಸಯ್ಯ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು-ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಬೆಂಗಳೂರಿನ ನ್ಯಾಯಾಲಯದ ತೀರ್ಪು ಹೊರಬೀಳುತ್ತಲೇ ಹಿರಿಯ ಅಧಿಕಾರಿಗಳನ್ನು ರಾಜಭವನಕ್ಕೆ ಕರೆಸಿ-ಕೊಂಡ ರೋಸಯ್ಯ, ಮುಂದೆ ಉದ್ಭವಿ-ಸ-ಬಹುದಾದ ಸಮಸ್ಯೆ ಮತ್ತು ತೆಗೆದು-ಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ನ್ಯಾಯಾಲಯ ಜಯಲಲಿತಾ ಅವರಿಗೆ ನಾಲ್ಕು ವರ್ಷ ಶಿಕ್ಷೆ ವಿಧಿಸಿ-ರುವುದರಿಂದ ಹೊಸ ಮುಖ್ಯಮಂತ್ರಿ ನೇಮಕ ಸಾಧ್ಯತೆ ಕುರಿತು ಚರ್ಚಿಸ-ಲಾಯಿತು ಎಂದು ಮೂಲಗಳು ತಿಳಿಸಿವೆ.

ಕರುಣಾನಿಧಿ ಮನವಿ: ಡಿಎಂಕೆ ನಾಯಕ ಎಂ.ಕರುಣಾನಿಧಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಷ್ಟ್ರಪತಿ, ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸೂಚನೆ: ಈ ನಡುವೆ ರಾಜ್ಯ-ದಲ್ಲಿ ಶಾಂತಿ, ಕಾನೂನು, ಸುವ್ಯವಸ್ಥೆ ಕಾಪಾಡಲು  ಅಗತ್ಯ ನೆರವು ನೀಡಲು ಸಿದ್ಧ ಎಂದು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರಕ್ಕೆ ಭರವಸೆ ನೀಡಿದೆ. ರಾಜ್ಯದ ಕೆಲವಡೆ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಅನೇಕ ವಾಹನಗಳು ಜಖಂಗೊಂಡಿವೆ.

ಕೆಲವೆಡೆ ಅಂಗಡಿಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚ-ಲಾಯಿತು. ಇನ್ನು ಕೆಲವಡೆ ಅಂಗಡಿ, ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಘಟನೆಗಳೂ ನಡೆದಿವೆ. ಉದ್ವಿಗ್ನ ಸ್ಥಿತಿಗೆ ಮತ್ತಷ್ಟು ತುಪ್ಪು ಸುರಿಯುವ ರೀತಿಯಲ್ಲಿ ರಾಜಕೀಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಬೆಂಗಳೂರು ಭಾಗದ ಗಡಿಯಾದ ಹೊಸೂರಿನಲ್ಲಿ ಹೆಚ್ಚಿನ ಬಿಗಿ ಭದ್ರತೆ ಮಾಡಲಾಗಿತ್ತು. ತಮಿಳುನಾಡು– ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಉಳಿದಂತೆ ರಾಜ್ಯದ ಇನ್ನೂ ಹಲವೆಡೆ ಹೆಚ್ಚಿನ ಬಿಗಿ ಭದ್ರ-ತೆಗೆ ವ್ಯವಸ್ಥೆ ಮಾಡಲಾಗಿದೆ. ಹೊಸೂ-ರಿ-ನಲ್ಲಿ ತಮಿಳುನಾಡು ನೋಂದ-ಣಿಯ ವಾಹನಗಳನ್ನು ವಿಶೇಷ ತಪಾಸಣೆಗೆ ಒಳಪಡಿಸ-ಲಾಯಿತು.

ಜಯಾ  ಅವರ ಕಟ್ಟಾ ರಾಜಕೀಯ ಎದುರಾಳಿಯಾದ ಎಂ.ಕರುಣಾನಿಧಿ ನೇತೃತ್ವದ ಡಿಎಂಕೆ  ಕಚೇರಿ ಹಾಗೂ ಪಕ್ಷದ ನಾಯಕರ  ನಿವಾಸಗಳಿಗೆ ಸೂಕ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಜಯಾ ವಿರುದ್ಧ  ಪ್ರಕರಣ ದಾಖಲಿಸಿದ ಬಿಜೆಪಿ ಧುರೀಣ ಸುಬ್ರಮಣಿಯನ್‌ ಸ್ವಾಮಿ ಅವರ ನಿವಾಸಕ್ಕೂ ಪೊಲೀಸ್‌ ಭದ್ರತೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.