ADVERTISEMENT

ಅನ್ಯಧರ್ಮೀಯರಿಗೆ ಅನುಮತಿ ಅಗತ್ಯ

​ಪ್ರಜಾವಾಣಿ ವಾರ್ತೆ
Published 3 ಜೂನ್ 2015, 19:30 IST
Last Updated 3 ಜೂನ್ 2015, 19:30 IST

ಅಹಮದಾಬಾದ್‌ (ಪಿಟಿಐ): ಹಿಂದು­ಗಳ­ಲ್ಲ­ದವರು ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡು­ವುದಕ್ಕೆ ಇನ್ನು  ಪೂರ್ವಾನುಮತಿ ಪಡೆದುಕೊಳ್ಳಬೇಕಾಗುತ್ತದೆ.

‘ಭದ್ರತೆ ದೃಷ್ಟಿಯಿಂದ ಈ ನಿರ್ಧಾ­ರಕ್ಕೆ  ಬರಲಾಗಿದೆ. ಹಿಂದುಗಳಲ್ಲದವರು ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ದೇವಸ್ಥಾನದ ಪ್ರಧಾನ ವ್ಯವಸ್ಥಾಪಕರ ಕಚೇರಿಯಿಂದ ಅನುಮತಿ ಪಡೆದುಕೊಳ್ಳಬೇಕು’ ಎಂದು ದೇವಸ್ಥಾನದ ಮುಖ್ಯ ಪ್ರವೇಶದ್ವಾರದಲ್ಲಿ ನೋಟಿಸ್‌ ಅಂಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.