ADVERTISEMENT

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 29 ಜುಲೈ 2014, 10:00 IST
Last Updated 29 ಜುಲೈ 2014, 10:00 IST

ನವದೆಹಲಿ(ಐಎಎನ್‌ಎಸ್):  ಅಪ್ರಾಪ್ತ ಶಾಲಾ ಬಾಲಕಿಗೆ ಬಂದೂಕು ತೋರಿಸಿ ಕೊಲ್ಲುವುದಾಗಿ ಬೆದರಿಸಿ ಐದು ಜನರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದೆಹಲಿಯ ಪಶ್ಚಿಮ ಭಾಗದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ   10ನೇ ತರಗತಿ ಓದುತ್ತಿದ್ದು,   ಆಕೆಯ  ಪರಿಚಯದವರೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮನೆಯೊಂದಕ್ಕೆ  ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು,ಇದನ್ನು ಮೊಬೈಲ್‌ನಲ್ಲಿ ಚಿತ್ರಿಕರಿಸಲಾಗಿದೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. 

ಐವರು ಆರೋಪಿಗಳಲ್ಲಿ ಮೂವರು ಬಾಲಕರು ಎಂದು ಅತ್ಯಾಚಾರಕ್ಕೆ ಒಳಗಾದ ಬಾಲಕಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT