ADVERTISEMENT

ಅಮೆರಿಕಕ್ಕೆ ಅರುಣ್ ಸಿಂಗ್‌ ರಾಯಭಾರಿ?

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2015, 19:30 IST
Last Updated 2 ಮಾರ್ಚ್ 2015, 19:30 IST

ನವದೆಹಲಿ: ಸದ್ಯ ಫ್ರಾನ್ಸ್ ರಾಯಭಾರಿಯಾಗಿರುವ ಅರುಣ್ ಸಿಂಗ್‌ ಅಮೆರಿಕದಲ್ಲಿ ಭಾರತದ ನೂತನ ರಾಯಭಾರಿಯಾಗುವ ಸಾಧ್ಯತೆ ಇದೆ. ಈವರೆಗೆ ಅಮೆರಿಕ ರಾಯಭಾರಿಯಾಗಿದ್ದ ಎಸ್.ಜೈಶಂಕರ್‌ ಅವರನ್ನು ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಕಾರಣ ಸ್ಥಾನ ತೆರವಾಗಿತ್ತು.

1979ನೇ ಸಾಲಿನ ಐಎಫ್‌ಎಸ್‌ ಅಧಿಕಾರಿಯಾಗಿರುವ ಅರುಣ್‌ ಸಿಂಗ್‌, ಈಗಾಗಲೇ ವಾಷಿಂಗ್ಟನ್‌ನ ಭಾರತೀಯ ರಾಯಭಾರ ಕಚೇರಿಯಲ್ಲಿ ಉಪ ಮುಖ್ಯಸ್ಥರ ಹುದ್ದೆಯನ್ನು ಐದು ವರ್ಷ  ನಿರ್ವಹಿಸಿದ್ದಾರೆ. ಇದಕ್ಕೂ ಮೊದಲು ಇಸ್ರೇಲ್‌ ರಾಯಭಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT