ADVERTISEMENT

ಅಸಾರಾಮ್ ಜಾಮೀನು ಅರ್ಜಿ ತಿರಸ್ಕಾರ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2015, 11:09 IST
Last Updated 27 ಮಾರ್ಚ್ 2015, 11:09 IST

ಅಹ್ಮದಾಬಾದ್‌ (ಪಿಟಿಐ): ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಮ್‌ ಬಾಪು ಅವರು ತಾತ್ಕಾಲಿಕ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.

ತನ್ನ ಸೋದರಳಿಯನ ಅಂತಿಮ ಸಂಸ್ಕಾರದ ವಿಧಿವಿಧಾನ ಕಾರ್ಯದಲ್ಲಿ ಭಾಗವಹಿಸಲು 30 ದಿನಗಳ ಕಾಲ ತಾತ್ಕಾಲಿಕ ಜಾಮೀನು ಮಂಜೂರು ಮಾಡುವಂತೆ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದ್ದು, ಜಾಮೀನು ಪಡೆಯಲು ಇದು ಸಕಾರಣವಲ್ಲ ಎಂದು ನ್ಯಾಯಮೂರ್ತಿ ಪರೇಶ್‌ ಉಪಾಧ್ಯಾಯ ಅವರಿದ್ದ ನ್ಯಾಯಪೀಠ ತಿಳಿಸಿದೆ.

ತಾತ್ಕಾಲಿಕ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಶುಕ್ರವಾರ ಅರ್ಜಿಯನ್ನು ತಿರಸ್ಕರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.