ADVERTISEMENT

ಅಸ್ಸಾಂ ಪ್ರವಾಸೋದ್ಯಮ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2016, 12:24 IST
Last Updated 19 ಡಿಸೆಂಬರ್ 2016, 12:24 IST
ಅಸ್ಸಾಂ ಪ್ರವಾಸೋದ್ಯಮ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ
ಅಸ್ಸಾಂ ಪ್ರವಾಸೋದ್ಯಮ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ   
ಅಸ್ಸಾಂ: ಅಸ್ಸಾಂ ರಾಜ್ಯದ ಪ್ರವಾಸೋದ್ಯಮ ದ ಪ್ರಚಾರ ರಾಯಭಾರಿಯಾಗಿ ಪ್ರಿಯಾಂಕಾ ಚೋಪ್ರಾ ಅವರೊಂದಿಗೆ ಎರಡು ವರ್ಷಗಳ ವರೆಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಆಯ್ಕೆ ಅಸ್ಸಾಂ ರಾಜ್ಯ ಸರ್ಕಾರ ತಿಳಿಸಿದೆ.
 
ಪ್ರವಾಸೋದ್ಯಮ ಸಚಿವ ಹಿಮಾಂತ ಬಿಸ್ವ ಶರ್ಮಾ ಅವರು ‘ಈ ಮೊದಲು ತಮ್ಮ ರಾಜ್ಯದ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗುವಂತೆ ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ ಅವರಿಗೆ ಆಹ್ವಾನ ನೀಡಿದ್ದೆವು. ಆದರೆ ಅವರು ಇದಕ್ಕೆ ಒಪ್ಪದ ಕಾರಣ ನಾವು ಪ್ರಿಯಾಂಕಾ ಚೋಪ್ರಾರಿಗೆ ಆಹ್ವಾನ ನೀಡಿದ್ದೆವು. ನಮ್ಮ ಮನವಿಯನ್ನು ಪುರಸ್ಕರಿಸಿರುವ ಅವರು ಯಾವುದೇ ಸಂಭಾವನೆ ಪಡೆಯದೆ, ರಾಯಭಾರಿಯಾಗುವುದಾಗಿ ಒಪ್ಪಿಕೊಂಡ್ಡಿದ್ದಾರೆ. ಈ ಸಂಬಂಧ ಈಗಾಗಲೇ ಎರಡು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ’ ಎಂದು ತಿಳಿಸಿದ್ದಾರೆ.
 
ನಾವು ಅವರಿಗೆ ಕೇವಲ ಶೂಟಿಂಗ್‌ ಹಾಗೂ ಜಾಹೀರಾತು ವೆಚ್ಚವನ್ನಷ್ಟೇ ಭರಿಸಲಿದ್ದೇವೆ ಎಂದೂ ಸಹ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.