ADVERTISEMENT

ಅಸ್ಸಾಂ, ಬಂಗಾಳದಲ್ಲಿ ಭೂಕಂಪ

​ಪ್ರಜಾವಾಣಿ ವಾರ್ತೆ
Published 28 ಜೂನ್ 2015, 7:15 IST
Last Updated 28 ಜೂನ್ 2015, 7:15 IST

ಗುವಾಹತಿ (ಪಿಟಿಐ): ಅಸ್ಸಾಂ, ಮೇಘಾಲಯ ಮತ್ತು ಪಶ್ಚಿಮ ಬಂಗಾಳದಲ್ಲಿ ಭೂಕಂಪವಾಗಿದ್ದು ಮೂವರಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.

ಈ ಮೂರು ರಾಜ್ಯಗಳ ಗಡಿ ಭಾಗದಲ್ಲಿ 5.6 ರಷ್ಟು ತೀವ್ರತೆಯ ಕಂಪನವಾಗಿದೆ. ಅಸ್ಸಾಂ, ಮೇಘಾಲಯ ಮತ್ತು ಬಂಗಾಳದ ಗಡಿ ಯಲ್ಲಿರುವ ಬಸ್‌ಗಾಂವ್‌ ಪ್ರದೇಶದಿಂದ  23 ಕಿ.ಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ.

ಭೂಮಿಯ 10 ಕಿ.ಮೀ ಆಳದಲ್ಲಿ ಕಂಪನವಾಗಿರುವುದರಿಂದ ಯಾವುದೇ ಸಾವು ನೋವು ಮತ್ತು ಆಸ್ತಿ ಪಾಸ್ತಿ ನಷ್ಟ ಉಂಟಾಗಿಲ್ಲ ಎಂದು ಭೂವಿಜ್ಞಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಳಗ್ಗೆ 6.30ರ ಸುಮಾರಿಗೆ ಭೂಕಂಪನವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.