ADVERTISEMENT

ಅ.1ರಿಂದ ‘ಗ್ರಾಮ ಸಮೃದ್ಧಿ ಏವಂ ಸ್ವಚ್ಛತಾ’ ಅಭಿಯಾನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2017, 19:47 IST
Last Updated 24 ಸೆಪ್ಟೆಂಬರ್ 2017, 19:47 IST

ನವದೆಹಲಿ(ಪಿಟಿಐ): ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಹಾಗೂ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಅಕ್ಟೋಬರ್‌1ರಿಂದ 15ರವರೆಗೆ  ಗ್ರಾಮ ಸಮೃದ್ಧಿ ಮತ್ತು ಸ್ವಚ್ಛತಾ ಪ್ರಚಾರ ಅಭಿಯಾನವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ.

‘ಗ್ರಾಮಗಳ ಅಭಿವೃದ್ಧಿಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಗಳ ಸಹಯೋಗದಲ್ಲಿ ಹಮ್ಮಿಕೊಳ್ಳುವ ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಎಲ್ಲಾ ಸಂಸದರಿಗೆ ಪತ್ರ ಬರೆಯ ಲಾಗಿದೆ’ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಹೇಳಿದ್ದಾರೆ.

‘ಹಳ್ಳಿಗಳ ಸಮಗ್ರ ಅಭಿವೃದ್ಧಿ ಗಾಗಿ ಪಂಚಾಯಿತಿ ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಂಸದರು ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.