ನವದೆಹಲಿ (ಪಿಟಿಐ): ಮಾಹಿತಿ ಹಕ್ಕು ಕಾಯ್ದೆ ಅನ್ವಯ ಕೇಳುವ ಮಾಹಿತಿಗಳನ್ನು ವೆಬ್ಸೈಟ್ ಮೂಲಕ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿಗೆ ಸಂಬಂಧಿಸಿ ನಿರ್ಧಾರ ತಳೆಯುವಂತೆ ಕೇಂದ್ರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ.
‘ಬಹಿರಂಗಪಡಿಸಬಹುದು‘ ನವದೆಹಲಿ (ಪಿಟಿಐ): ತನಿಖೆಗೆ ಅಡ್ಡಿಯಾಗುತ್ತದೆ ಎನ್ನುವ ಕಾರಣಕ್ಕೆ ಆರೋಪಟ್ಟಿ ಬಹಿರಂಗಪಡಿಸ-ದಿರಲು ಸಾಧ್ಯವಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ ಸೋಮವಾರ ಹೇಳಿದೆ. |
‘ಅರ್ಜಿಗೆ ಸಂಬಂಧಿಸಿ ಮೂರು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುತ್ತಿದ್ದೇವೆ’ ಎಂದು ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಹಾಗೂ ನ್ಯಾಯಮೂರ್ತಿ ಎ.ಕೆ.ಸಿಕ್ರಿ ಅವರಿದ್ದ ಪೀಠ ಹೇಳಿದೆ.
ಆರ್ಟಿಐ ಅಡಿ ಮಾಹಿತಿ ಕೇಳಿ ಅಂತರ್ಜಾಲದ ಮೂಲಕ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಸೂಕ್ತ ವೆಬ್ಸೈಟ್್ ರೂಪಿಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಬೇಕು ಎಂದು ಕೋರಿ ವಕೀಲ ಅಮಿತ್ ಕುಮಾರ್್ ಮೂಲಕ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಬಿಹಾರ ಸರ್ಕಾರ ಮಾಡಿರುವಂತೆ ಆರ್ಟಿಐ ಅರ್ಜಿ ಸಲ್ಲಿಸುವುದಕ್ಕೆ ಕಾಲ್್ ಸೆಂಟರ್್ ಸ್ಥಾಪಿಸಬೇಕು ಎಂದೂ ಅರ್ಜಿಯಲ್ಲಿ ಕೋರಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.