ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ನಡೆಸುವ ಈ ವರ್ಷದ ನಾಗರಿಕ ಸೇವೆಯ ಪೂರ್ವಭಾವಿ ಪರೀಕ್ಷೆ ಆಗಸ್ಟ್ 7ರಂದು ನಡೆಯಲಿದೆ ಎಂದು ಯುಪಿಎಸ್ಸಿ ಅಧಿಸೂಚನೆ ಹೊರಡಿಸಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27ರ ಮಧ್ಯರಾತ್ರಿ 11.59ರವರೆಗೆ ಅವಕಾಶ ಇದೆ. ನಂತರ ಈ ಸಂಪರ್ಕವೇ ಕಡಿತಗೊಳ್ಳುತ್ತದೆ. ಭಾರತೀಯ ನಾಗರಿಕ ಸೇವೆಯಲ್ಲಿ ಈ ಬಾರಿ 1,079 ಹುದ್ದೆಗಳನ್ನು ಭರ್ತಿ ಮಾಡುವ ನಿರೀಕ್ಷೆ ಇದೆ. ಬೆಂಗಳೂರು, ಮೈಸೂರು ಸೇರಿ ದೇಶದ 72 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.