ADVERTISEMENT

ಇಂಗ್ಲಿಷ್‌ ಪ್ರಶ್ನೆಪತ್ರಿಕೆಯ ಅನುವಾದವೇ ಆಗಿರಲಿದೆ ಪ್ರಾದೇಶಿಕ ಭಾಷೆಯ 'ನೀಟ್‌'

ಪಿಟಿಐ
Published 23 ಜುಲೈ 2017, 9:53 IST
Last Updated 23 ಜುಲೈ 2017, 9:53 IST
ಇಂಗ್ಲಿಷ್‌ ಪ್ರಶ್ನೆಪತ್ರಿಕೆಯ ಅನುವಾದವೇ ಆಗಿರಲಿದೆ ಪ್ರಾದೇಶಿಕ ಭಾಷೆಯ 'ನೀಟ್‌'
ಇಂಗ್ಲಿಷ್‌ ಪ್ರಶ್ನೆಪತ್ರಿಕೆಯ ಅನುವಾದವೇ ಆಗಿರಲಿದೆ ಪ್ರಾದೇಶಿಕ ಭಾಷೆಯ 'ನೀಟ್‌'   

ಕೋಲ್ಕತಾ: ಪ್ರಾದೇಶಿಕ ಭಾಷೆಯಲ್ಲಿನ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ(ನೀಟ್) ಪ್ರಶ್ನೆಪತ್ರಿಕೆಗಳು ಇಂಗ್ಲಿಷ್‌ ಪ್ರಶ್ನೆಪತ್ರಿಕೆಯ ಅನುವಾದಿತ ಪ್ರಶ್ನೆಗಳನ್ನೇ ಒಳಗೊಂಡಿರಲಿವೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ.

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ನಡೆಸಲಾಗುವ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ(ನೀಟ್)ಯ ಪ್ರಾದೇಶಿಕ ಭಾಷೆಯಲ್ಲಿನ ಪ್ರಶ್ನೆಪತ್ರಿಕೆಗಳು ಇಂಗ್ಲಿಷ್‌ನಲ್ಲಿರುವ ಪ್ರಶ್ನೆಪತ್ರಿಕೆಯ ಅನುವಾದವೇ ಆಗಿರಲಿವೆ ಎಂದು ಪ್ರತಿಕ್ರಿಯಿಸಿದ್ದಾರೆ

ಈ ಸಾಲಿನ ರಾಷ್ಟ್ರೀಯ ಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಯಲ್ಲಿ ತೆಗೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯಲ್ಲಿನ ಪ್ರಶ್ನೆಪತ್ರಿಕೆಗಳಿಗಿಂತ ಕಠಿಣ ಪ್ರಶ್ನೆಗಳು ಎದುರಾಗಿವೆ ಎಂದು ಪಶ್ವಿಮ ಬಂಗಾಳದ ಶಿಕ್ಷಣ ಸಚಿವರು ಇತ್ತೀಚೆಗೆ ಆರೋಪಿಸಿದ್ದರು.

ADVERTISEMENT

ಎಂಜಿನಿಯರಿಂಗ್‌ ಕಾಲೇಜು ಪ್ರವೇಶಕ್ಕಾಗಿ ‘ಒಂದು ರಾಷ್ಟ್ರ ಒಂದು ಪರೀಕ್ಷೆ’ ಅಳವಡಿಕೆ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.