ಲಖನೌ (ಐಎಎನ್ಎಸ್): ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಏಳು ವರ್ಷದ ಬಾಲಕಿ ಮೇಲೆ ಮೂರು ಜನ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ಮುಜಫ್ಫರನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
‘ಬಾಲಕಿ ಬಹಿರ್ದೆಸೆಗೆ ತೆರಳಿದ್ದಾಗ ಒಬ್ಬ ಆರೋಪಿ ಅಲ್ಲಿದ್ದ ಪೊದೆ ಸಮೀಪ ಆಕೆಯನ್ನು ಎಳೆದುಕೊಂಡು ಹೋಗಿ ಆತನ ಇನ್ನಿಬ್ಬರು ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಒಬ್ಬನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಅವರಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.