ADVERTISEMENT

ಉತ್ತರಪ್ರದೇಶ, ಮಹಾರಾಷ್ಟ್ರದ ಬಳಿಕ ಪಂಜಾಬ್‌ನಲ್ಲೂ ರೈತರ ಸಾಲ ಮನ್ನಾ

ಏಜೆನ್ಸೀಸ್
Published 19 ಜೂನ್ 2017, 16:10 IST
Last Updated 19 ಜೂನ್ 2017, 16:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಂಡೀಗಢ: ಉತ್ತರಪ್ರದೇಶ, ಮಹಾರಾಷ್ಟ್ರದ ಬಳಿಕ ಇದೀಗ ಪಂಜಾಬ್‌ನಲ್ಲೂ ರೈತರ ಸಾಲ ಮನ್ನಾ ಮಾಡಲಾಗಿದೆ. 5 ಎಕರೆವರೆಗೆ ಭೂಮಿ ಹೊಂದಿರುವ ಸಣ್ಣ ಮತ್ತು ಮಧ್ಯಮ ವರ್ಗದ ರೈತರ ₹ 2 ಲಕ್ಷದವರೆಗಿನ ಬೆಳೆ ಸಾಲ ಮನ್ನಾ ಮಾಡುವುದಾಗಿ ಪಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಸೋಮವಾರ ವಿಧಾನಸಭೆಯಲ್ಲಿ ಘೋಷಿಸಿದರು.

ಇದರಿಂದ ಸುಮಾರು 10.25 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ರಾಜ್ಯದಲ್ಲಿ ಒಟ್ಟು 18 ಲಕ್ಷ ರೈತರಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಕ್ಕೆ ನೀಡಲಾಗುವ ಹಣಕಾಸು ನೆರವನ್ನು ₹ 3 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದೂ ಅಮರಿಂದರ್ ಸಿಂಗ್ ತಿಳಿಸಿದರು.

ಆರ್ಥಿಕ ತಜ್ಞ ಟಿ. ಹಕ್ ನೇತೃತ್ವದ ತಜ್ಞರ ಸಮಿತಿ ನೀಡಿದ ಮಧ್ಯಂತರ ವರದಿಯ ಆಧಾರದಲ್ಲಿ ಸಾಲ ಮನ್ನಾ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.