ADVERTISEMENT

ಉತ್ತರ ಪ್ರದೇಶ ಸಿ.ಎಂ ಆಯ್ಕೆ ಶನಿವಾರ?

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2017, 19:30 IST
Last Updated 16 ಮಾರ್ಚ್ 2017, 19:30 IST
ಉತ್ತರ ಪ್ರದೇಶ ಸಿ.ಎಂ ಆಯ್ಕೆ ಶನಿವಾರ?
ಉತ್ತರ ಪ್ರದೇಶ ಸಿ.ಎಂ ಆಯ್ಕೆ ಶನಿವಾರ?   

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆಯಲ್ಲಿ ನಾಲ್ಕನೇ ಮೂರರಷ್ಟು ಭಾರಿ ಬಹುಮತ ಪಡೆದಿರುವ ಬಿಜೆಪಿ ಶಾಸಕಾಂಗದ ಪಕ್ಷದ ನಾಯಕನ ಆಯ್ಕೆಗಾಗಿ ಶನಿವಾರ ಸಭೆ ನಡೆಯಲಿದೆ. ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಆಯ್ಕೆ ಶುಕ್ರವಾರ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಲಖನೌದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ಅವರು ವೀಕ್ಷಕರಾಗಿರುತ್ತಾರೆ.

ಪಕ್ಷದ ಅಧ್ಯಕ್ಷ ಅಮಿತ್‌ ಷಾ ಅವರಿಗೆ ವೀಕ್ಷಕರು ವರದಿ ನೀಡಲಿದ್ದಾರೆ. ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಹೊಣೆಯನ್ನು ಪಕ್ಷದ ಸಂಸದೀಯ ಮಂಡಳಿಯು ಷಾ ಅವರಿಗೆ ನೀಡಿದೆ.

ಎರಡು ಪ್ರಮುಖ ರಾಜ್ಯಗಳ ಮುಖ್ಯಮಂತ್ರಿಗಳ ಆಯ್ಕೆಯಲ್ಲಿ ಪಕ್ಷವು ಅತಿಯಾದ ಎಚ್ಚರಿಕೆ ತೆಗೆದುಕೊಳ್ಳುತ್ತಿದೆ. ಹಾಗಾಗಿಯೇ ಆಯ್ಕೆ ವಿಳಂಬವಾಗುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಷಾ ಅವರದ್ದೇ ಅಂತಿಮ ತೀರ್ಮಾನವಾಗಿರುತ್ತದೆ.

ತಾವು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದರೆ ಅವರೂ ಒಬ್ಬ ಆಕಾಂಕ್ಷಿ ಎಂದು ಪಕ್ಷದ ಮೂಲಗಳು ಹೇಳಿವೆ.

ಅವರು ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ರ‍್ಯಾಲಿಗಳಲ್ಲಿ ಭಾಗವಹಿಸಿದ್ದರು. ಕೇಂದ್ರ ಸಚಿವ ಮನೋಜ್‌ ಸಿನ್ಹಾ, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಕೇಶವ ಪ್ರಸಾದ್‌ ಮೌರ್ಯ ಅವರೂ ಸ್ಪರ್ಧೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT