ADVERTISEMENT

ಉಪರಾಷ್ಟ್ರಪತಿಯಾಗಿ ಎಂ.ವೆಂಕಯ್ಯ ನಾಯ್ಡು ಆಯ್ಕೆ

ಪಿಟಿಐ
Published 5 ಆಗಸ್ಟ್ 2017, 14:39 IST
Last Updated 5 ಆಗಸ್ಟ್ 2017, 14:39 IST
ಉಪರಾಷ್ಟ್ರಪತಿಯಾಗಿ ಎಂ.ವೆಂಕಯ್ಯ ನಾಯ್ಡು ಆಯ್ಕೆ
ಉಪರಾಷ್ಟ್ರಪತಿಯಾಗಿ ಎಂ.ವೆಂಕಯ್ಯ ನಾಯ್ಡು ಆಯ್ಕೆ   

ನವದೆಹಲಿ: ಸಂಸತ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು ಆಯ್ಕೆಯಾದರು.

ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿದ್ದ ಎಂ. ವೆಂಕಯ್ಯ ನಾಯ್ಡು ಅವರು 516 ಮತ ಪಡೆದಿದ್ದಾರೆ. ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು 244 ಮತ ಪಡೆದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆಗೆ ನಡೆದ ಮತದಾನದಲ್ಲಿ ಶೇಕಡಾ 98.21ರಷ್ಟು ಮತ ಚಲಾವಣೆಯಾಗಿವೆ. ಒಟ್ಟು 785 ಸಂಸದರ ಪೈಕಿ 771 ಮಂದಿ ಹಕ್ಕು ಚಲಾಯಿಸಿದ್ದಾರೆ ಸಹಾಯಕ ಚುನಾವಣಾ ಅಧಿಕಾರಿ ಮುಕುಲ್‌ ಪಾಂಡೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.