ADVERTISEMENT

ಉರುಳಿದ ರೈಲು: ಇಬ್ಬರು ಸಾವು

ಕಲಬುರ್ಗಿಯ ಮರ್ತೂರು ಬಳಿ ಘಟನೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2015, 5:17 IST
Last Updated 12 ಸೆಪ್ಟೆಂಬರ್ 2015, 5:17 IST

ಕಲಬುರ್ಗಿ (ಪಿಟಿಐ): ಸಿಕಂದರಾಬಾದ್‌– ಮುಂಬೈ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ಕಲಬುರ್ಗಿಯಿಂದ ಸುಮಾರು 20 ಕಿ.ಮೀ ದೂರದ ಮರ್ತೂರು ಬಳಿ ರೈಲಿನ 9 ಬೋಗಿಗಳು ಉರುಳಿವೆ. ಮಧ್ಯರಾತ್ರಿ 2.15ರ ಸುಮಾರಿಗೆ ಘಟನೆ ನಡೆದಿದೆ ಎಂದು ಕಲಬುರ್ಗಿಯ ಎಸ್ಪಿ ಅಮಿತ್‌ ಸಿಂಗ್‌ ತಿಳಿಸಿದ್ದಾರೆ.

ಗಾಯಗೊಂಡವರನ್ನು ಮಹಾರಾಷ್ಟರದ ಸೊಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಸಿಂಗ್‌ ಹೇಳಿದ್ದಾರೆ.

ADVERTISEMENT

ರೈಲ್ವೆ ಸಚಿವ ಸುರೇಶ್‌ ಪ್ರಭು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಕೇಂದ್ರ ವಲಯದ ರೈಲ್ವೆ ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಎ.ಕೆ. ಮಿತ್ತಲ್‌ ತಿಳಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ ರೂ. 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ರೂ. 50 ಸಾವಿರ ಹಾಗೂ ಸಾಮಾನ್ಯ ಗಾಯಗಳಾದವರಿಗೆ ರೂ. 25 ಸಾವಿರ ಪರಿಹಾರ ಘೋಷಿಸಲಾಗಿದೆ.

ಸಹಾಯವಾಣಿ ಸಂಖ್ಯೆಗಳು:
ಕಲಬುರ್ಗಿ: 0847- 2255066 / 2255067
ಸಿಕಂದರಾಬಾದ್‌: 040-27700968
ಸೊಲ್ಲಾಪುರ: 0217- 2313331
ಛತ್ರಪತಿ ಶಿವಾಜಿ ಟರ್ಮಿನಸ್‌: 022-22694040
ಲೋಕಮಾನ್ಯ ತಿಲಖ್‌ ಟರ್ಮಿನಸ್‌: 022- 25280005
ಕಲ್ಯಾಣ್‌: 0251- 2311499

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.