ADVERTISEMENT

ಎಎಪಿ ಶಾಸಕರ ಅನರ್ಹತೆ ತಳ್ಳಿಹಾಕಿದ ದೆಹಲಿ ಹೈಕೋರ್ಟ್

ಸತ್ಯಕ್ಕೆ ಸಂದ ಜಯ: ಕೇಜ್ರಿವಾಲ್

ಏಜೆನ್ಸೀಸ್
Published 23 ಮಾರ್ಚ್ 2018, 10:10 IST
Last Updated 23 ಮಾರ್ಚ್ 2018, 10:10 IST
ಅರವಿಂದ ಕೇಜ್ರಿವಾಲ್ (ಸಂಗ್ರಹ ಚಿತ್ರ)
ಅರವಿಂದ ಕೇಜ್ರಿವಾಲ್ (ಸಂಗ್ರಹ ಚಿತ್ರ)   

ನವದೆಹಲಿ: ಲಾಭದಾಯಕ ಹುದ್ದೆ ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) 20 ಶಾಸಕರನ್ನು ಅನರ್ಹಗೊಳಿಸಿರುವ ಚುನಾವಣಾ ಆಯೋಗದ ಕ್ರಮವನ್ನು ದೆಹಲಿ ಹೈಕೋರ್ಟ್ ತಳ್ಳಿಹಾಕಿದೆ.

ಪ್ರಕರಣದ ಬಗ್ಗೆ ಮರಳಿ ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ‘ಚುನಾವಣಾ ಆಯೋಗದ ನಿರ್ಧಾರ ಕಾನೂನುರೀತ್ಯಾ ಸಮರ್ಪಕವಾಗಿರದೆ, ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸುವಲ್ಲಿ ವಿಫಲವಾಗಿದೆ’ ಎಂದು ಕೋರ್ಟ್‌ ಹೇಳಿದೆ.

‘ಸತ್ಯಕ್ಕೆ ಸಂದ ಜಯ’: ಹೈಕೋರ್ಟ್ ನೀಡಿರುವ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.