ADVERTISEMENT

ಎಚ್‌.ಪಿ.ಲೋಯಾ ಸಾವಿನ ಪ್ರಕರಣ: ಉನ್ನತಮಟ್ಟದ ತನಿಖೆಗೆ ಸಿಪಿಎಂ ಆಗ್ರಹ

ಪಿಟಿಐ
Published 23 ನವೆಂಬರ್ 2017, 14:33 IST
Last Updated 23 ನವೆಂಬರ್ 2017, 14:33 IST
ಎಚ್‌.ಪಿ.ಲೋಯಾ ಸಾವಿನ ಪ್ರಕರಣ: ಉನ್ನತಮಟ್ಟದ ತನಿಖೆಗೆ ಸಿಪಿಎಂ ಆಗ್ರಹ
ಎಚ್‌.ಪಿ.ಲೋಯಾ ಸಾವಿನ ಪ್ರಕರಣ: ಉನ್ನತಮಟ್ಟದ ತನಿಖೆಗೆ ಸಿಪಿಎಂ ಆಗ್ರಹ   

ನವದೆಹಲಿ: ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್‌.ಪಿ.ಲೋಯಾ ಸಾವಿನ ಪ್ರಕರಣವನ್ನು ಉನ್ನತಮಟ್ಟದ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಸಿಪಿಎಂ ಗುರುವಾರ ಆಗ್ರಹಿಸಿದೆ.

ಸೊಹ್ರಾಬುದ್ದೀನ್‌ ಶೇಖ್‌ ಎನ್‌ಕೌಂಟರ್‌ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಲೋಯಾ ಅವರು ಮೃತಪಟ್ಟಿದ್ದು, ಅವರ ಸಾವು ಅಸಹಜವಾಗಿದೆ ಎಂದು ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ  ಲೋಯಾ ಸಾವಿನ ಪ್ರಕರಣವನ್ನು  ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಸಿಪಿಎಂ  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸೊಹ್ರಾಬುದ್ದೀನ್‌ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಯಾ ಅವರಿಗೆ ಲಂಚದ ಆಮಿಷ ಒಡ್ಡುವ ಮತ್ತು ಬೆದರಿಸುವ ಯತ್ನಗಳು ನಡೆದ ಬಗ್ಗೆ ಅವರ ಕುಟುಂಬದ ಸದಸ್ಯರು  ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಲೋಯಾ ಅವರನ್ನು ಕೊಲೆ ಮಾಡಲಾಗಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟಿಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಸಿಪಿಎಂ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.