ADVERTISEMENT

ಎಲ್ಲ 125 ಕೋಟಿ ಜನರಿಗೆ ಉದ್ಯೋಗ ನೀಡಲಾಗದು: ಅಮಿತ್‌ ಷಾ

ಏಜೆನ್ಸೀಸ್
Published 27 ಮೇ 2017, 9:39 IST
Last Updated 27 ಮೇ 2017, 9:39 IST
ಅಮಿತ್‌ ಷಾ (ಸಾಂದರ್ಭಿಕ ಚಿತ್ರ)
ಅಮಿತ್‌ ಷಾ (ಸಾಂದರ್ಭಿಕ ಚಿತ್ರ)   

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದಷ್ಟು ಉದ್ಯೋಗಾವಕಾಶ ಸೃಷ್ಟಿಸಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ತಿರುಗೇಟು ನೀಡಿದ್ದಾರೆ. ದೇಶದ ಎಲ್ಲ 125 ಕೋಟಿ ಜನರಿಗೆ ನಾವು ಉದ್ಯೋಗ ದೊರಕಿಸಿಕೊಡಲಾಗದು ಎಂದು ಅವರು ಹೇಳಿದ್ದಾರೆ.

ಎನ್‌ಡಿಎ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರೇಂದ್ರ ಮೋದಿ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಪ್ರಕರಣ ದಾಖಲಾಗಿಲ್ಲ. ಜಾತೀವಾದ, ಕುಟುಂಬ ರಾಜಕಾರಣವನ್ನು ಕೊನೆಗೊಳಿಸಲಾಗಿದೆ. ಕಳೆದ 70 ವರ್ಷಗಳಲ್ಲಿ ಮಾಡಲಾಗದ ಕೆಲಸವನ್ನು ಈಗಿನ ಸರ್ಕಾರ ಅತ್ಯಲ್ಪ ಅವಧಿಯಲ್ಲಿ ಮಾಡಬೇಕೆಂದರೆ ಕಷ್ಟಸಾಧ್ಯ’ ಎಂದು ಹೇಳಿದ್ದಾರೆ.

‘ಉದ್ಯೋಗಾವಕಾಶಕ್ಕೆ ಹೊಸ ದೃಷ್ಟಿಕೋನ ನೀಡಲು ನಾವು ಪ್ರಯತ್ನಿಸಿದ್ದೇವೆ. ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಎಂಟು ಕೋಟಿಯಷ್ಟು ಜನ ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ’ ಎಂದು ಷಾ ಹೇಳಿದ್ದಾರೆ.

ADVERTISEMENT

‘ವಾರ್ಷಿಕ 2 ಕೋಟಿ ಯುವಕರಿಗೆ ಉದ್ಯೋಗ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, 2015ರಲ್ಲಿ ಕೇವಲ 1.45 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿತ್ತು’ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಇತ್ತೀಚೆಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.