ADVERTISEMENT

ಐಆರ್‌ಸಿಟಿಸಿ ವೆಬ್‌ಸೈಟ್‌ಗೆ ಕನ್ನ

​ಪ್ರಜಾವಾಣಿ ವಾರ್ತೆ
Published 5 ಮೇ 2016, 9:26 IST
Last Updated 5 ಮೇ 2016, 9:26 IST
ಐಆರ್‌ಸಿಟಿಸಿ ವೆಬ್‌ಸೈಟ್‌ಗೆ ಕನ್ನ
ಐಆರ್‌ಸಿಟಿಸಿ ವೆಬ್‌ಸೈಟ್‌ಗೆ ಕನ್ನ   

ನವದೆಹಲಿ: ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ (ಐಆರ್‌ಸಿಟಿಸಿ) ವೆಬ್ ಸೈಟ್ ಅನ್ನು ಹ್ಯಾಕ್ ಮಾಡಲಾಗಿದ್ದು, ಲಕ್ಷಾಂತರ ನಾಗರಿಕರ ವೈಯಕ್ತಿಕ ಮಾಹಿತಿ ಕಳುವಾಗಿರುವ ಬಗ್ಗೆ  ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ವೆಬ್‌ಸೈಟ್‌ ಹ್ಯಾಕ್‌ ಆಗಿರುವ ವಿಷಯ ರೈಲ್ವೆ ಇಲಾಖೆಯ ಐಆರ್‌ಸಿಟಿಸಿಗೆ ತಿಳಿದಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.  ಮಹಾರಾಷ್ಟ್ರದ ಸೈಬರ್‌ ಅಪರಾಧ ವಿಭಾಗದ ಪೊಲೀಸರು ಐಆರ್‌ಸಿಟಿಸಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ದೇಶದ ಅತಿದೊಡ್ಡ  ಟ್ರಾವಲ್‌ ಬುಕ್ಕಿಂಗ್‌  ವೆಬ್‌ಸೈಟ್‌ ಆಗಿದ್ದು  ನಿತ್ಯ ಲಕ್ಷಾಂತರ ಜನರು ಇಲ್ಲಿ ಪ್ರಯಾಣದ ಬಗ್ಗೆ  ನೋಂದಣಿ ಮಾಡುತ್ತಾರೆ.  ವೆಬ್‌ಸೈಟ್‌ ಹ್ಯಾಕ್‌ ಆಗಿರುವುದರಿಂದ  ಗ್ರಾಹಕರ  ಫೋನ್ ನಂಬರ್, ಇಮೇಲ್ ಐಡಿ, ಆಧಾರ್ ಕಾರ್ಡ್, ಡಿಎಲ್ ನಂಬರ್ ಸೇರಿದಂತೆ ಇತರೆ ಮಾಹಿತಿಗಳು ಕಳುವಾಗಿರವ ಸಾಧ್ಯತೆಗಳಿವೆ ಎಂದು ಸೈಬರ್‌ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಸೈಬರ್‌ ಪೊಲೀಸರು ಮತ್ತು ಐಆರ್‌ಸಿಟಿಸಿ ತಂತ್ರಜ್ಞರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.