ADVERTISEMENT

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 9:55 IST
Last Updated 23 ಮಾರ್ಚ್ 2018, 9:55 IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂಗೆ ಜಾಮೀನು
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂಗೆ ಜಾಮೀನು   

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ಬಂಧನದಲ್ಲಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

ಫೆ.28ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾರ್ತಿ ಅವರನ್ನು ಬಂಧಿಸಲಾಗಿತ್ತು. ನಂತರ ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಕಾರ್ತಿ ಅವರನ್ನು ತಿಹಾರ್‌ ಜೈಲಿನ ಪ್ರತ್ಯೇಕ ಕೊಣೆಯಲ್ಲಿ ಇರಿಸಲಾಗಿದೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕಾರ್ತಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ADVERTISEMENT

ಪಿ. ಚಿದಂಬರಂ ಅವರು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ, ಪೀಟರ್‌ ಮುಖರ್ಜಿ ಹಾಗೂ ಅವರ ಪತ್ನಿ ಇಂದ್ರಾಣಿ ಒಡೆತನದ ಐಎನ್‌ಎಕ್ಸ್‌ ಮಾಧ್ಯಮ ಸಮೂಹಕ್ಕೆ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯಿಂದ (ಎಫ್‌ಐಪಿಬಿ) ನಿರಾಕ್ಷೇಪಣಾ ಪತ್ರ ಕೊಡಿಸಿದ ಆರೋಪ ಕಾರ್ತಿ ಅವರ ಮೇಲಿದೆ.

[related]

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.