ADVERTISEMENT

ಐಎಸ್‌ ಉಗ್ರರು: ಪ್ರಾಬಲ್ಯಕ್ಕೆ ಯತ್ನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2015, 11:28 IST
Last Updated 3 ಜುಲೈ 2015, 11:28 IST

ಜಾನಗರ್‌ (ಪಿಟಿಐ):  ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಐಎಸ್‌ ಉಗ್ರರು ಪ್ರಾಬಲ್ಯ ಸಾಧಿಸಲು ಯತ್ನಿಸುತ್ತಿದ್ದಾರೆ ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿ ಲೆ.ಜನರಲ್‌ ಕೆ. ಎಚ್‌. ಸಿಂಗ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಐಎಸ್‌ ಉಗ್ರರು ಪ್ರಾಬಲ್ಯ ಸಾಧಿಸಲು ಯತ್ನಿಸುತ್ತಿದ್ದಾರೆ. ಉಗ್ರರ ನೂರಾರು ಗುಂಪುಗಳು ಅಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಸಿಂಗ್‌ ವಿವರಿಸಿದರು.

ಐಎಸ್‌ ಉಗ್ರರು ಭಾರತದ ಗಡಿಯೊಳಗೆ ನುಗ್ಗಲು ಹಲವು ಸಲ ಯತ್ನಿಸಿದ್ದು ಅವರನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಸಿಂಗ್‌ ತಿಳಿಸಿದರು.

ಪಾಕ್‌ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಉಗ್ರರ ಮೇಲೆ ನಿಗಾ ಇಡಲಾಗಿದೆ ಎಂದು ಅವರು ತಿಳಿಸಿದರು. ಕೆ.ಎಚ್‌ ಸಿಂಗ್‌ ಇಲ್ಲಿನ ಜಾನಗರ್‌ ಹಬ್ಬದಲ್ಲಿ ಭಾಗವಹಿಸಿ ಮಾಧ್ಯಮ ಮಿತ್ರರ ಜೊತೆ ಮಾತನಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT