ADVERTISEMENT

ಐಟಿಬಿಪಿಯಿಂದ ಗಡಿಯಲ್ಲಿ ಮಹಿಳಾ ಸಿಬ್ಬಂದಿ ನಿಯೋಜನೆ

ಪಿಟಿಐ
Published 24 ಅಕ್ಟೋಬರ್ 2016, 19:30 IST
Last Updated 24 ಅಕ್ಟೋಬರ್ 2016, 19:30 IST

ಗ್ರೇಟರ್ ನೊಯ್ಡಾ : ಇಂಡೊ–ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ) ಇದೇ ಮೊದಲ ಬಾರಿಗೆ 100 ಮಹಿಳಾ ಸಿಬ್ಬಂದಿಯನ್ನು ಭಾರತ–ಚೀನಾ ಗಡಿಯ 15 ಗಡಿಚೌಕಿಗಳಲ್ಲಿ ನಿಯೋಜಿಸಿದೆ.

ಆಯ್ದ ಗಡಿಚೌಕಿಗಳಲ್ಲಿ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸುವುದಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಇತ್ತೀಚೆಗೆ ಪೂರ್ಣಗೊಳಿಸಲಾಗಿತ್ತು ಎಂದು ಐಟಿಬಿಪಿ ಪ್ರಧಾನ ನಿರ್ದೇಶಕ ಕೃಷ್ಣ ಚೌಧರಿ ತಿಳಿಸಿದ್ದಾರೆ.

ಮಹಿಳಾ ಸಿಬ್ಬಂದಿಗೆ ಯುದ್ಧ ತರಬೇತಿ ನೀಡಲಾಗಿದೆ. ಗಡಿಚೌಕಿಗಳಲ್ಲಿ ಅವರಿಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಈ ಪೈಕಿ ಹೆಚ್ಚಿನ ಮಹಿಳೆಯರನ್ನು ಜಮ್ಮು ಮತ್ತು ಕಾಶ್ಮೀರದ ಲಡಾಖ್‌ನ ಗಡಿಚೌಕಿಗಳಲ್ಲಿ ನಿಯೋಜಿಸಲಾಗಿದೆ. ಇನ್ನು ಕೆಲವರನ್ನು ಹಿಮಾಚಲಪ್ರದೇಶ, ಉತ್ತರಾಖಂಡ, ಸಿಕ್ಕಿಂ ಮತ್ತು ಅರುಣಾಚಲಪ್ರದೇಶದ ಗಡಿಚೌಕಿಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ ಹುದ್ದೆಗಾಗಿ 500 ಮಹಿಳೆಯರನ್ನು ಐಟಿಬಿಪಿ ಈ ವರ್ಷ ಆರಂಭದಲ್ಲಿ ಚೀನಾ ಗಡಿಯಲ್ಲಿ ನಿಯೋಜಿಸಿತ್ತು. ಅವರಿಗೆ 44 ವಾರಗಳ ಕಠಿಣ ತರಬೇತಿ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.